Webdunia - Bharat's app for daily news and videos

Install App

ಎಸ್.ಎಂ.ಕೃಷ್ಣ ಇಲ್ಲದ ಕಾಂಗ್ರೆಸ್ ಪಕ್ಷದಲ್ಲಿ ನಾನು ಇರುವುದಿಲ್ಲ: ರವೀಂದ್ರ ಶ್ರೀಕಂಠಯ್ಯ

Webdunia
ಮಂಗಳವಾರ, 31 ಜನವರಿ 2017 (15:45 IST)
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಲ್ಲದ ಕಾಂಗ್ರೆಸ್ ಪಕ್ಷದಲ್ಲಿ ನಾನು ಇರುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ನನ್ನ ರಾಜೀನಾಮೆ ರವಾನಿಸಿದ್ದೇನೆ ಎಂದು ಕೆಪಿಸಿಸಿ ಸದಸ್ಯ ರವೀಂದ್ರ ಶ್ರೀಕಂಠಯ್ಯ ತಿಳಿಸಿದ್ದಾರೆ. 
 
ಶ್ರೀರಂಗಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2005 ರಲ್ಲಿ ಕಾಂಗ್ರೆಸ್ ಪಕ್ಷ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಿಡತದಲ್ಲಿತ್ತು. 2005ರ ನಂತರ ಕಾಂಗ್ರೆಸ್ ಹೈಕಮಾಂಡ್ ದುರ್ಬಲಗೊಂಡಿದೆ. ಈ 2013ರಲ್ಲಿ ನನಗೆ ಅಧಿಕೃತವಾಗಿ ದೆಹಲಿಯಲ್ಲಿ ಟಿಕೆಟ್ ಘೋಷಣೆ ಮಾಡಿದ್ದರು. ಆದರೆ, ರಾಜ್ಯ ನಾಯಕರು ನನಗೆ ಟಿಕೆಟ್ ಕೊಡದೇ ಬದಲಾಯಿಸಿದರು ಎಂದು ಆರೋಪಿಸಿದರು. 
 
ನನ್ನಂತ ಹಲವರು ಕಾಂಗ್ರೆಸ್ ಪಕ್ಷದಲ್ಲಿ ನರಳಿದ್ದಾರೆ. ಅವಮಾನ ಅನುಭವಿಸಿದ್ದಾರೆ ಎಂದು ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 
 
ಬೆಂಗಳೂರು ಅಭಿವೃದ್ಧಿಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕಾರಣ ಎಂದು ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಸ್ಮರಿಸಿದ್ದರು. ಆದರೆ, ಅವರನ್ನು ಪಕ್ಷದಲ್ಲಿ ಕಡೆಗಣಿಸಿರುವು ಏಷ್ಟು ಸರಿ ಎಂದು ಕೆಪಿಸಿಸಿ ಸದಸ್ಯ ರವೀಂದ್ರ ಶ್ರೀಕಂಠಯ್ಯ ಪ್ರಶ್ನಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments