Publish Date: Mon, 11 Dec 2017 (07:20 IST)
Updated Date: Mon, 11 Dec 2017 (07:27 IST)
ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣ ರವಿ ಬೆಳಗೆರೆ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆ, ರವಿ ಬೆಳಗೆರೆ ಪರ ವಕೀಲ ದಿವಾಕರ್ ಜಾಮೀನಿಗಾಗಿ ಯತ್ನಿಸುತ್ತಿದ್ದಾರೆ.
ರವಿ ಆರೋಗ್ಯ ಸ್ಥಿತಿಯ ಹಿನ್ನೆಲೆಯಲ್ಲಿ ದಿವಾಕರ್ ಜಾಮೀನಿಗೆ ಯತ್ನಿಸುತ್ತಿದ್ದಾರೆ. ಇದಕ್ಕಾಗಿ ವೈದ್ಯರಿಂದ ಆರೋಗ್ಯ ಸ್ಥಿತಿಯ ಪ್ರಮಾಣ ಪತ್ರವನ್ನು ಕೂಡ ಪಡೆದುಕೊಂಡಿದ್ದಾರೆ. ರವಿ ಬೆಳಗರೆಯನ್ನು ಈಗಾಗಲೇ ದಿವಾಕರ್ ಎರಡು ಬಾರಿ ಭೇಟಿ ಮಾಡಿ ಚರ್ಚಿಸಿದ್ದಾರೆ. ಕೊಲೆಯತ್ನ, ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸ್ ಹಿನ್ನೆಲೆ, ರವಿ ಬೆಳಗೆರೆ ಜಾಮೀನು ಸಿಗದಿದ್ದರೆ ನ್ಯಾಯಾಂಗ ಬಂಧನವಾಗುವ ಸಾಧ್ಯತೆ ಇದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ