Publish Date: Sat, 16 Dec 2017 (19:35 IST)
Updated Date: Sat, 16 Dec 2017 (19:37 IST)
ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ಹಾಯ್ ಬೆಂಗಳೂರು ಸಂಸ್ಥಾಪಕ ರವಿ ಬೆಳಗೆರೆ ಅವರ ಜಾಮೀನು ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಿಸಲಾಗಿದೆ.
ಡಿಸೆಂಬರ್ 16 ರ ವರೆಗೆ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಇಂದಿಗೆ ಮಧ್ಯಂತರ ಜಾಮೀನು ಅರ್ಜಿ ಅವಧಿ ಮುಗಿದ ಹಿನ್ನೆಲೆಯಲ್ಲಿ ರವಿ ಬೆಳಗೆರೆಯವರ ಜಾಮೀನು ಅರ್ಜಿ ವಿಚಾರಣೆ 65ನೇ ಸೆಷನ್ಸ್ ಕೋರ್ಟ್ ನಲ್ಲಿ ನಡೆಯಿತು.ಆದರೆ, ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸದಂತೆ ಸಿಸಿಬಿ ವಕೀಲರು ಮನವಿ ಮಾಡಿದ್ದರು.
ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೂಡ ವಕೀಲರ ಜೊತೆಗೆ ಕೋರ್ಟ್‌ಗೆ ಹಾಜರಾಗಿದ್ದರು. ಸೆಷನ್ಸ್ ಕೋರ್ಟ್ ನ್ಯಾಯಮೂರ್ತಿ ಮಧುಸೂದನ್ ಅವರು ಜಾಮೀನು ಅವಧಿಯನ್ನು 18ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.