Select Your Language

Notifications

webdunia
webdunia
webdunia
webdunia

ರವಿ ಬೆಳಗೆರೆ ಆರೋಗ್ಯದಲ್ಲಿ ಏರುಪೇರು- ಮತ್ತೆ ಆಸ್ಪತ್ರೆಗೆ ಕರೆದೊಯ್ಯುವ ಸಾಧ್ಯತೆ

ರವಿ ಬೆಳಗೆರೆ ಆರೋಗ್ಯದಲ್ಲಿ ಏರುಪೇರು- ಮತ್ತೆ ಆಸ್ಪತ್ರೆಗೆ ಕರೆದೊಯ್ಯುವ ಸಾಧ್ಯತೆ
ಬೆಂಗಳೂರು , ಬುಧವಾರ, 13 ಡಿಸೆಂಬರ್ 2017 (09:25 IST)
ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಹಾಯ್ ಬೆಂಗಳೂರು ಸಂಸ್ಥಾಪಕ ರವಿ ಬೆಳಗೆರೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮತ್ತೆ ಅವರನ್ನು ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆಯಿದೆ.

ಅನಾರೋಗ್ಯದ ಕಾರಣ ಬೆಳಗೆರೆ ಅವರನ್ನು ಮಂಗವಾರ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ವೈದ್ಯರು ರವಿ ಬೆಳಗೆರೆಯವರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳುವ ಅಗತ್ಯವಿಲ್ಲ. ರಕ್ತಪರೀಕ್ಷೆ ವರದಿ ಬಂದ ಬಳಿಕ ನಿರ್ಧರಿಸೋಣ ಎಂದಿದ್ದರು. ಆದ್ದರಿಂದ ಪುನಃ ಅವರನ್ನು ಜೈಲಿಗೆ ಕಳುಹಿಸಲಾಗಿತ್ತು.

ರವಿ ಬೆಳಗೆರೆ ಎರಡನೇ ದಿನವನ್ನು ಜೈಲಿನಲ್ಲಿ ಕಳೆದಿದ್ದಾರೆ. ಆದರೆ, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ. ಸರಿಯಾಗಿ ಸ್ಪಂದನೆ ಕೂಡ ನೀಡುತ್ತಿಲ್ಲ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಗುಜರಾತ್ ಚುನಾವಣೆಗೆ ಎರಡನೇ ಹಂತದ ಮತದಾನ ನಾಳೆ