Publish Date: Sat, 01 Dec 2018 (20:43 IST)
Updated Date: Sat, 01 Dec 2018 (20:46 IST)
ಜಿಲ್ಲಾ ಕ್ರೀಡಾಂಗಣದಲ್ಲಿ ಹೆಚ್.ಕೆ.ಆರ್.ಡಿ.ಬಿ. ಅನುದಾನದಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳಿಗೆ ಪ್ರಥಮಾದ್ಯತೆ ನೀಡಿ ಪೂರ್ಣಗೊಳಿಸಬೇಕು ಎಂದು ಪ್ರಾದೇಶಿಕ ಆಯುಕ್ತರು ಸೂಚನೆ ನೀಡಿದ್ದಾರೆ.
ಕಲಬುರಗಿ ನಗರದ ಚಂದ್ರಶೇಖರ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಹೆಚ್.ಕೆ.ಆರ್.ಡಿ.ಬಿ. ಅನುದಾನದಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳಿಗೆ ಪ್ರಥಮಾದ್ಯತೆ ನೀಡಿ ಪೂರ್ಣಗೊಳಿಸಬೇಕು ಎಂದು ಅನುಷ್ಠಾನ ಏಜೆನ್ಸಿಗಳಿಗೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಹೆಚ್.ಕೆ.ಆರ್.ಬಿ. ಕಾರ್ಯದರ್ಶಿ ಸುಬೋಧ ಯಾದವ ಸೂಚಿಸಿದರು.
ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿಯ ತಮ್ಮ ಕೊಠಡಿಯಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು ಅನುಷ್ಠಾನ ಎಜೆನ್ಸಿ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕ್ರೀಡಾಂಗಣದಲ್ಲಿ ವಿವಿಧ ಮೂಲಭೂತ ಮತ್ತು ಕ್ರೀಡಾ ಚಟುವಟಿಕೆಗೆ ಪೂರಕವಾಗಿ ಹೈ.ಕ.ಮಂಡಳಿ ಹೆಚ್ಚಿನ ಅನುದಾನ ಖರ್ಚು ಮಾಡುತ್ತಿದೆ.
ಆದರೆ ನಿಗಧಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳದ ಕಾರಣ ಕ್ರೀಡಾಳುಗಳಿಗೆ ಇದರ ಸೌಲಭ್ಯ ದೊರಕುತ್ತಿಲ್ಲ. ಬ್ಯಾಡಮಿಂಟನ್ ಹಾಲ್‍ಗೆ ಆರ್.ಸಿ.ಸಿ.ಶೀಟ್ ಅಳವಡಿಸಬೇಕಾಗಿದ್ದು, ಕೂಡಲೆ ಅಂದಾಜು ಪಟ್ಟಿ ಸಲ್ಲಿಸುವಂತೆ ಕೆ.ಆರ್.ಐ.ಡಿ.ಎಲ್ ಕಾರ್ಯನಿರ್ವಾಹಕ ಅಭಿಯಂತರರಿಗೆ ಸೂಚಿಸಿದರು.