Publish Date: Wed, 30 Mar 2022 (19:08 IST)
Updated Date: Wed, 30 Mar 2022 (19:12 IST)
ಐಪಿಎಲ್ 15ನೇ ಆವೃತ್ತಿಯ 5ನೇ ದಿನದ 6ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಎದುರಾಗಲಿದ್ದು, ಮುಂಬೈನ ಡಾ.ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರೀಡಾಂಗಣದಲ್ಲಿ ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದೆ. ಈಗಾಗಲೇ ಕಿಂಗ್ಸ್ ಪಂಜಾಬ್ ವಿರುದ್ಧ ಪರಾಭವಗೊಂಡಿರುವ ಆರ್‌ಸಿಬಿ ಗೆಲುವಿನ ಹಾದಿಯತ್ತ ನಡೆಯಲು ಸಜ್ಜಾಗಿದ್ದರೆ, ಇನ್ನೊಂದೆಡೆ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವಿನ ಶುಭಾರಂಭ ಮಾಡಿರುವ ಕೆಕೆಆರ್ ಜಯದ ಯಾತ್ರೆ ಮುಂದುವರಿಸಲು ಸನ್ನದ್ಧವಾಗಿದೆ. ಕೋಲ್ಕತಾ ಈಗಾಗಲೇ 2012 ಮತ್ತು 2014ರಲ್ಲಿ ಎರಡು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆದರೆ ಆರ್‌ಸಿಬಿ ಮೂರು ಬಾರಿ ಫೈನಲ್ಸ್ ಪ್ರವೇಶಿಸಿ ಟ್ರೋಫಿಯಿಂದ ವಂಚಿತವಾಗಿದೆ. ಒಂದು ಬಾರಿ ರನ್ನರ್ ಅಪ್ ಪ್ರಶಸ್ತಿ ಪಡೆಯುವಲ್ಲಿ ಸೀಮಿತವಾಗಿದೆ.