Publish Date: Sat, 18 Apr 2026 (21:09 IST)
Updated Date: Sat, 18 Apr 2026 (21:35 IST)
ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾಟದಲ್ಲಿ ಆರ್‌ಸಿಬಿ 6 ವಿಕೆಟ್‌ಗಳಿಂದ ಸೋಲು ಅನುಭವಿಸಿತು. ಈ ಮೂಲಕ ತವರಿನಲ್ಲಿ ಮೊದಲನೇ ಸೋಲಿನ ಕಹಿ ಉಂಡಿತು.
ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 175 ರನ್ ಗಳಿಸಿತು. ಈ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 19.5 ಓವರ್‌ಗಳಲ್ಲಿ 4 ವಿಕೆಟ್‌ಗೆ 179ರನ್ ಗಳಿಸಿ ಜಯದ ನಗೆ ಬೀರಿತು.
ಈ ಮೂಲಕ ಆರ್‌ಸಿಬಿ ಎರಡು ಸೋಲಿನೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನಕ್ಕೆ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕನೇ ಸ್ಥಾನದಲ್ಲಿದೆ.