ಬೆಂಗಳೂರು: ವಿದ್ಯುತ್ ಖರೀದಿ ಹಗರಣದಲ್ಲಿ ಬಿಜೆಪಿ ಸರ್ಕಾರದಲ್ಲಿ ಇಂಧನ ಸಚಿವೆಯಾಗಿದ್ದ ಶೋಭಾ ಕರಂದ್ಲಾಜೆ ಹೆಸರು ಕೇಳಿಬಂದಿರುವ ಹಿನ್ನಲೆಯಲ್ಲಿ ಚರ್ಚೆಗೆ ಸಿದ್ಧ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವರದಿಯಲ್ಲಿ ಶೋಭಾ ಕರಂದ್ಲಾಜೆ ಹೆಸರು ಪ್ರಸ್ತಾಪವಾಗಿದೆ. ವಿದ್ಯುತ್ ಖರೀದಿ ಅವ್ಯವಹಾರದಿಂದ ಸಾವಿರಾರು ಕೋಟಿ ರೂ. ನಷ್ಟವಾಗಿದೆ ಎನ್ನಲಾಗುತ್ತಿದೆ.
ಒಂದು ವೇಳೆ ಸ್ಪೀಕರ್ ಅನುಮತಿ ಕೊಟ್ಟರೆ ಈ ಬಗ್ಗೆ ಚರ್ಚೆಗೆ ಬಿಜೆಪಿ ಸಿದ್ಧವಿದೆ ಎಂದು ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. ಈ ವಿಚಾರ ಸದನದಲ್ಲಿ ಭಾರೀ ಕೋಲಾಹಲವೆಬ್ಬಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!