ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ನನ್ನ ಅಭ್ಯಂತರವಿಲ್ಲ. ಆದರೆ, ವಿವಾದ ಕುರಿತಂತೆ ಸಂಸತ್‌ನಲ್ಲಿ ಧ್ವನಿ ಎತ್ತಲು ಸಾಧ್ಯವಾಗುವುದಿಲ್ಲ ಎನ್ನುವ ನೋವು ಕಾಡುತ್ತಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಅಸಮಾಧಾನ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ನ್ಯಾಯಸಮ್ಮತವಲ್ಲ. ಈ ಹಿನ್ನೆಲೆಯಲ್ಲಿ ನಾಳೆ ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಲು ಸಿದ್ಧ. ಆದರೆ, ಸಂಸತ್‌ನಲ್ಲಿ ಧ್ವನಿ ಎತ್ತುವವರು ಯಾರು ಎಂದು ಪ್ರಶ್ನಿಸಿದ್ದಾರೆ.
ಒಂದು ಲೋಟ ನೀರಿಗಾಗಿ ನಾವು ಅಮ್ಮನ ಬಳಿ ಕೈಚಾಚುವ ಪರಿಸ್ಥಿತಿ ಎದುರಾಗಿದೆ. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯವರು ಧ್ವನಿ ಎತ್ತುವುದಿಲ್ಲ ಎಂದು ಆರೋಪಿಸಿದರು.
ಪ್ರಧಾನಿ ಮೋದಿ ಪ್ರಮುಖ ಪಾತ್ರ ವಹಿಸಲಿ........
ಕಾವೇರಿ ವಿವಾದ ಕರ್ನಾಟಕ ಹಾಗೂ ತಮಿಳುನಾಡಿನ ಮಧ್ಯದ ಸಮಸ್ಯೆಯಾಗಿದ್ದು, ವಿವಾದದಲ್ಲಿ ಪ್ರಧಾನಿ ಮೋದಿ ಅವರು ಪ್ರಮುಖ ಪಾತ್ರ ವಹಿಸಿ ಸಮಸ್ಯೆ ಇತ್ಯರ್ಥಗೊಳಿಸಲಿ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಕೈ ಮುಗಿದು ಕೇಳಿಕೊಂಡರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ