Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ

Webdunia
ಸೋಮವಾರ, 22 ಫೆಬ್ರವರಿ 2016 (16:08 IST)
74 ವರ್ಷ ವಯಸ್ಸಿನ ರಿಯಲ್ ಎಸ್ಟೇಟ್ ಉದ್ಯಮಿಯ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆಗೈದಿದ್ದಾರೆ.
 
ನಗರದ ಆರ್‌ಎಂಸಿ ಯಾರ್ಡ್ ಬಳಿಯಿರುವ ನಿವಾಸಕ್ಕೆ ನುಗ್ಗಿದ ಆರೋಪಿಗಳು ಮೊಬೈಲ್ ಚಾರ್ಜರ್ ವೈರಿನಿಂದ ಉದ್ಯಮಿ ಜಿಲ್ಬೆಟ್ ಕೋರೀಯಾರನ್ನು ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
 ಉದ್ಯಮಿಯ ಹತ್ಯೆಗೆ ರಿಯಲ್ ಎಸ್ಟೇಟ್ ಸಂಬಂಧಿಸಿದ ವಿವಾದಗಳು ಕಾರಣವಾಗಿರಬಹುದೇ ಅಥವಾ ಅನೈತಿಕ ಸಂಬಂಧ ಹತ್ಯೆಗೆ ಕಾರಣವಾಗಿರಬಹುದೇ ಎನ್ನುವ ಅನುಮಾನಗಳು ಪೊಲೀಸರು ವ್ಯಕ್ತಪಡಿಸಿದ್ದು ತನಿಖೆ ಮುಂದುವರಿಸಿದ್ದಾರೆ.
 
ಹೈಪ್ರೋಫೈಲ್ ಉದ್ಯಮಿಯಾಗಿದ್ದ ಕೋರೀಯಾ ಹತ್ಯೆ ಕುರಿತಂತೆ, ರಿಯಲ್ ಎಸ್ಟೇಟ್ ಉದ್ಯಮಿಗಳು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. 
 
ಕಳ್ಳರು ಮನೆಗೆ ಬಂದು ದೋಚಿ ಹತ್ಯೆ ಮಾಡಿರಬಹುದೇ ಎನ್ನುವ ಸಂಶಯ ಕೂಡಾ ಪೊಲೀಸರು ವ್ಯಕ್ತಪಡಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಜಾಲ ಬೀಸಲಾಗಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.   

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments