Publish Date: Thu, 31 Jan 2019 (16:00 IST)
Updated Date: Thu, 31 Jan 2019 (16:02 IST)
ಸಿದ್ದಗಂಗಾ ಶ್ರೀಗಳ ಪುಣ್ಯಸ್ಮರಣೆಯನ್ನು ಭಕ್ತಾದಿಗಳು ರಾಜ್ಯಾದ್ಯಂತ ಆಚರಣೆ ಮಾಡುತ್ತಿದ್ದಾರೆ.
ಕಲಬುರಗಿ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸಿದ್ಧಗಂಗಾ ಶ್ರೀಗಳ ಪುಣ್ಯ ಸ್ಮರಣೆ ಆಚರಣೆ ಮಾಡಲಾಯಿತು.
ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದಿಂದ ಪುಣ್ಯಸ್ಮರಣೆ ಸಮಾರಂಭ ಆಯೋಜನೆ ಮಾಡಲಾಗಿತ್ತು.
ಶ್ರೀಶೈಲ ಸಾರಂಗ ಮಠದ ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಮತ್ತಿತರರಿಂದ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಲಾಯಿತು.
ಸಿದ್ಧಗಂಗಾ ಶ್ರೀಗಳ ಕೊಡುಗೆಯ ಸ್ಮರಣೆಯನ್ನು ಮಾಡಲಾಯಿತು.