ಕರ್ನಾಟಕದಲ್ಲಿ ದಾಖಲೆಯ ಮಳೆ

Webdunia
ಮಂಗಳವಾರ, 12 ಜುಲೈ 2022 (16:50 IST)
ರಾಜ್ಯದ ಮಲೆನಾಡು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸೋಮವಾರವೂ ಮಳೆ ಮುಂದುವರಿದಿದ್ದರೆ, ಕರಾವಳಿ ಜಿಲ್ಲೆಗಳಲ್ಲಿ ತುಸು ಕಡಿಮೆಯಾಗಿದೆ. ಆದರೆ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡ್ಡ ಕುಸಿದಿದ್ದು, ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಕಾರು ಚಿಕ್ಕಮಗಳೂರು ಜಿಲ್ಲೆಯ ಗೌರಿ ಹೊಳೆಗೆ ಉರುಳಿ ಚಾಲಕ ಸೇರಿ ಇಬ್ಬರು ನಾಪತ್ತೆ ಆಗಿದ್ದಾರೆ. ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ 24 ಮನೆಗಳು ಭಾಗಶಃ ಕುಸಿದಿದ್ದರೆ, ಗಡಿ ಜಿಲ್ಲೆ ಬೀದರ್‌ನಲ್ಲಿ 12 ಮನೆಗಳು ಕುಸಿದಿವೆ.
 
ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಕಲ್ಮಕ್ಕಿ ಬಳಿ ನೀರೋಡಿ ಹೊಳೆಗೆ ಅಡ್ಡಲಾಗಿ ಕಟ್ಟಲಾಗಿರುವ ಸೇತುವೆಯ ಮೇಲ್ಭಾಗ ಸಂಪೂರ್ಣ ಕೊಚ್ಚಿ ಹೋಗಿದೆ. ಸೇತುವೆಯು ಕುಸಿಯುವ ಭೀತಿ ಎದುರಾಗಿದ್ದು, ರಸ್ತೆ ಸಂಪರ್ಕ ಕಡಿದುಹೋಗಿದೆ. ಬಂಟ್ವಾಳ ತಾಲ್ಲೂಕಿನ ಸೂರಿಕುಮೇರು ಬಳಿಯೂ ಗುಡ್ಡ ಕುಸಿದಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಯಿತು.
 
ಚಿಕ್ಕಮಗಳೂರು ಜಿಲ್ಲೆಯಲ್ಲಿ ಅರೆನೂರು ಮತ್ತು ಸದಾಶಿವಗಡ ಬಳಿ ಗುಡ್ಡ ಕುಸಿದಿದೆ. ಇದರಿಂದಾಗಿ ಸದಾಶಿವಗಡ-ಬೆಳಗಾವಿ ಸಂಪರ್ಕ ಕಡಿತವಾಗಿದೆ. ಇತ್ತ, ಹಾಸನ ಜಿಲ್ಲೆಯಲ್ಲಿ ದ್ವಾರಸಮುದ್ರ ಕೆರೆಯು ಕೋಡಿ ಬಿದ್ದಿದ್ದು, ಕೊಣನೂರು-ರಾಮನಾಥಪುರ ನಡುವಿನ ಸಂಪರ್ಕ ಬಂದ್‌ ಆಗಿತ್ತು. ಸಕಲೇಶಪುರ ತಾಲ್ಲೂಕು ದೋಣಿಗಲ್‌ ಬಳಿ ಸೋಮವಾರವೂ ಹೆದ್ದಾರಿ ಬದಿ ಭೂಕುಸಿತವಾಗಿದ್ದು, ಸಂಚಾರ ಸ್ಥಗಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿ ಫೈಟ್ ನಿವಾರಣೆಗೆ ಹೈಕಮಾಂಡ್ ಅಖಾಡಕ್ಕೆ: ಈಗೆಲ್ಲಿದ್ದಾರೆ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಗೆ ಪಟ್ಟ ಕಟ್ಟಲು ಕೈ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ

ಎಲ್ಲಾ ಹೈಕಮಾಂಡ್ ನಿರ್ಧರಿಸುತ್ತದೆ ಎಂದ ಮಲ್ಲಿಕಾರ್ಜುನ ಖರ್ಗೆ: ಹಾಗಿದ್ರೆ ನೀವ್ಯಾರು ಎಂದು ಪ್ರಶ್ನಿಸಿದ ಪಬ್ಲಿಕ್

Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ಮುಂದಿನ ಸುದ್ದಿ
Show comments