Publish Date: Wed, 01 Nov 2023 (19:21 IST)
Updated Date: Wed, 01 Nov 2023 (19:10 IST)
ರಾಜ್ಯ ಸಾರಿಗೆ ಇಲಾಖೆಯಲ್ಲಿ ಶೀಘ್ರ 8000 ಹುದ್ದೆಗಳ ನೇಮಕಾತಿ ಹಾಗೂ ಹೊಸ ಬಸ್ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಪ್ರಕಟಿಸಿದ್ದಾರೆ.
ಮಾದ್ಯಮಗಳೊಂದಿಗೆ ಮಾತನಾಡಿದ ಅವರು ನಾನು 2013ರಲ್ಲಿ ಮಂತ್ರಿ ಇದ್ದಾಗ ನೇಮಕಾತಿ ಮಾಡಿರುವುದು ಬಿಟ್ಟರೆ ಮತ್ತೆ ನೇಮಕಾತಿಯಾಗಿಲ್ಲ.ಇನ್ನು ಶೀಘ್ರದಲ್ಲಿ ಹೊಸ ಬಸ್ ಖರೀದಿ ಮತ್ತು ಖಾಲಿ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದೆ ಎಂದರು.