ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗಿದೆ.ಇಂದು ಮತ್ತು ನಾಳೆ ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ಪರೀಕ್ಷೆಗಳು ನಡೆಯಲಿದೆ.
ಪರೀಕ್ಷೆಗಳಿಗೆ ಹಿಜಾಬ್ ಧರಿಸಿ ಅಭ್ಯರ್ಥಿಗಳು ಹಾಜರಾಗಲು ಅವಕಾಶ ನೀಡಲಾಗಿದೆ.ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈಗಾಗಲೇ ಸುತ್ತೋಲೆ ಹೊರಡಿಸಿ ಮಾಹಿತಿ ನೀಡಿದೆ.
KEA ನಿರ್ಧಾರ ಈಗ ತೀವ್ರ ವಿರೋಧಕ್ಕೆ ಕಾರಣವಾಗಿದೆ.ಹಿಂದೂಪರ ಸಂಘಟನೆಗಳಿಂದ ಹಿಜಾಬ್‌ಗೆ ವಿರೋಧ ನಡುವೆಯೇ ಇಂದು ಪರೀಕ್ಷೆ ನಡೆಯಲಿದೆ.ಪರೀಕ್ಷೆಗೆ ಅಭ್ಯರ್ಥಿಗಳು ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಿರಬೇಕು.ಮಹಿಳಾ ಸಿಬ್ಬಂದಿಯಿಂದ ಅಭ್ಯರ್ಥಿಗಳ ತಪಾಸಣೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಾಹಿತಿ ನೀಡಲಾಗಿದೆ.