Publish Date: Wed, 05 Jul 2023 (10:17 IST)
Updated Date: Wed, 05 Jul 2023 (11:17 IST)
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಿದ್ದು, ಜುಲೈ 5ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.5 ರವರೆಗೆ ರೆಡ್ ಅಲರ್ಟ್ ಘೋಷಣೆಯಾಗಿರುವ ಕಾರಣ ಬುಧವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.