Select Your Language

Notifications

webdunia
webdunia
webdunia
webdunia

ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ರೆಡ್ ಅಲರ್ಟ್ : ಏನಿದು ಸೂಚನೆ?

ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ರೆಡ್ ಅಲರ್ಟ್ : ಏನಿದು ಸೂಚನೆ?
ಬೆಂಗಳೂರು , ಬುಧವಾರ, 28 ಸೆಪ್ಟಂಬರ್ 2022 (12:06 IST)
ಬೆಂಗಳೂರು : ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು 5 ವರ್ಷ ಬ್ಯಾನ್ ಮಾಡಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ಕರ್ನಾಟಕ ಸೇರಿ 6 ಜಿಲ್ಲೆಗಳಿಗೆ ಕೇಂದ್ರ ಗುಪ್ತಚರ ಇಲಾಖೆಯಿಂದ ರೆಡ್ ಅಲರ್ಟ್ ಸೂಚನೆ ನೀಡಲಾಗಿದೆ.

ಪಿಎಫ್ಐ ಪ್ರಬಲವಾಗಿರುವ ರಾಜ್ಯಗಳಿಗೆ ಕೇಂದ್ರ ಗುಪ್ತಚರ ಇಲಾಖೆ ಅಲರ್ಟ್ ಮೆಸೇಜ್ ನೀಡಿದ್ದು, ಕೇರಳ, ಕರ್ನಾಟಕ, ತಮಿಳುನಾಡು, ಆಂದ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣಕ್ಕೆ ರೆಡ್ ಅಲರ್ಟ್ ನೀಡಿದೆ.

ಪ್ರತಿಭಟನೆಗೆ ಅವಕಾಶ ನೀಡಬೇಡಿ, ಗುಂಪು ಸೇರಲು ಅವಕಾಶ ನೀಡದಂತೆ, ಯಾವುದೇ ರೀತಿಯ ಗಲಭೆ ಸೃಷ್ಟಿ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಈ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸೋದು ಪಕ್ಕಾ ?