Publish Date: Sun, 10 Apr 2022 (19:26 IST)
Updated Date: Sun, 10 Apr 2022 (19:29 IST)
ವಿಜಯನಗರರ ಜಿಲ್ಲೆಯ ಹರಪನಹಳ್ಳಿಯಲ್ಲಿ ಹಮ್ಮಿಕೊಂಡಿರುವ ಸೀತಾರಾಮ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಗೌರವ ಸಲ್ಲಿಸುವುದರ ಮೂಲಕ ಚಾಲನೆ ನೀಡಿದರು. ಅನೇಕ ವರ್ಷಗಳ ನಂತರ ಸಹೋದರರಾದ ಕರುಣಾಕರ ರೆಡ್ಡಿ, ಗಾಲಿ ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ ಒಂದೇ ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡರು. ಕರುಣಾಕರ ರೆಡ್ಡಿ ಅವರ 60ನೇ ಜನ್ಮದಿನದ ಪ್ರಯುಕ್ತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಿಎಂ ಬೊಮ್ಮಾಯಿ ಅಕ್ಕಪಕ್ಕವೇ ರೆಡ್ಡಿ ಸಹೋದರರು ಕುಳಿತಿದ್ದರು. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲು ಸೇರಿದ್ದ ನಂತರ ಸಹೋದರರು ದೂರವಾಗಿದ್ದರು.