‘ರೆಡ್ಡಿ ಟೀಮ್, ಶ್ರೀರಾಮುಲುಗೆ ಸಚಿವ ಸ್ಥಾನ ಬೇಡವೇ ಬೇಡ’

ಸೋಮವಾರ, 29 ಜುಲೈ 2019 (15:20 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸಭೆ ಕಲಾಪದಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ. ಏತನ್ಮಧ್ಯೆ ಕೆಲವು ನಾಯಕರು ತಮಗೆ ಹಾಗೂ ತಮಗೆ ಬೇಕಾದವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಡ ತಂತ್ರಕ್ಕೆ ಮೊರೆ ಹೋಗಿದ್ದರೆ ಇತ್ತ ಸಚಿವ ಸ್ಥಾನ ಕೊಡಬೇಡಿ ಅಂತ ಆಗ್ರಹವನ್ನೂ ಮಾಡಲಾಗುತ್ತಿದೆ.

ಬಳ್ಳಾರಿ ಜಿಲ್ಲೆಯ ಮುಖಂಡ ಟಪಾಲ್ ಗಣೇಶ್ ಅವರು ಬಿ.ಎಸ್.ಯಡಿಯೂರಪ್ಪಗೆ ಮನವಿ ಮಾಡಿಕೊಂಡಿದ್ದು, ಯಾವುದೇ ಕಾರಣಕ್ಕೂ ಗಾಲಿ ಜನಾರ್ಧನ ರೆಡ್ಡಿ ಹಾಗೂ ಬಿ.ಶ್ರೀರಾಮುಲು ಹಾಗೂ ಅವರ ತಂಡಕ್ಕೆ ಸಚಿವ ಸ್ಥಾನ ನೀಡಬೇಡಿ ಅಂತ ಒತ್ತಾಯಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಹೆಸರನ್ನು ಕೆಡಿಸಿದ ಅಪಕೀರ್ತಿ ಹಾಗೂ ಅಕ್ರಮಗಣಿಗಾರಿಕೆ ಆರೋಪ ಹೊತ್ತಿರೋರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಡಿ ಅಂತ ಬಿಜೆಪಿ ಮುಖಂಡರಿಗೆ ಹೇಳಿದ್ದಾರೆ.


ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಬಾಂಗ್ಲಾ ವಲಸಿಗರನ್ನು ದೇಶದಿಂದ ಹೊರದಬ್ಬಿ