Publish Date: Sat, 31 Mar 2018 (11:36 IST)
Updated Date: Sat, 31 Mar 2018 (13:20 IST)
ಕಲಬುರಗಿ : ‘ಕಾಂಗ್ರೆಸ್ ಪಕ್ಷ ತೊರೆಯುವುದಾಗಿ ತಂದೆ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರುತ್ತಾರೆ ಎಂಬುದು ಸುಳ್ಳು ಸುದ್ದಿ ಎಂದು ಅಫಜಲಪುರ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರ ಪುತ್ರ ಫರ್ಹತಾಬಾದ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಿತೇಶ್ ಗುತ್ತೇದಾರ್ ಅವರು ಹೇಳಿದ್ದಾರೆ.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡದ ರೀತೇಶ್ ಅವರು, ಕಾಂಗ್ರೆಸ್ ಪಕ್ಷದಲ್ಲಿ ನಮ್ಮ ತಂದೆಯವರಿಗೆ ಅನ್ಯಾಯವಾಗಿದ್ದು ನಿಜ. ರಾಜ್ಯ ಕಾಂಗ್ರೆಸ್‌ನಲ್ಲಿ ಹಿರಿಯ ಶಾಸಕರಾಗಿದ್ದರೂ ಅವರ ಗೌರವಕ್ಕೆ ತಕ್ಕುದಾದ ಸ್ಥಾನಮಾನ ನೀಡುವಲ್ಲಿ ನಾಯಕರು ವಿಫಲವಾಗಿದ್ದಾರೆ.
ಹೀಗಾಗಿ ಪಕ್ಷ ತೊರೆಯುವುದಾಗಿ ತಂದೆ ಹೇಳಿಕೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜೊತೆಗೂ ಚರ್ಚೆ ಮಾಡಿದ್ದಾರೆ. ಆದರೆ ಮೈಸೂರಿನಲ್ಲಿ ನಡೆಯುವ ಅಮಿತ್ ಶಾ ಸಮ್ಮುಖದಲ್ಲಿ ಅವರು ಬಿಜೆಪಿ ಸೇರ್ಪಡೆಗೊಳ್ಳುತ್ತಾರೆ ಎನ್ನುವುದು ಸುಳ್ಳು’ ಎಂದು ಹೇಳಿದ್ದಾರೆ.
ಹಾಗೇ ಮಾಲೀಕಯ್ಯ ಗುತ್ತೇದಾರ್ ಅವರು ಶನಿವಾರ ಅಫಜಲ್ಪುರ ತಾಲೂಕಿನ ಸ್ಟೇಷನ್ ಗಾಣಗಾಪುರದಲ್ಲಿ ಕಾರ್ಯಕರ್ತರ ಸಭೆ ಕರೆದಿದ್ದು, ಆ ಬಳಿಕ ಮುಂದಿನ ರಾಜಕೀಯ ನಡೆ ಏನೆಂಬುದನ್ನು ತಿಳಿಸಲಿದ್ದಾರೆ ಎಂದು ರಿತೇಶ್ ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ