ಬಿಬಿಎಂಪಿ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಖಾತಾಗೆ ಸಂಬಂಧಿಸಿದ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವ ಉದ್ದೇಶದಿಂದ ಫೆಬ್ರವರಿ 3 ರಿಂದ 5 ರವರೆಗೆ ಖಾತಾ ಮೇಳವನ್ನು ಆಯೋಜಿಸಲಾಗಿದೆ.ನಗರದ ಎಲ್ಲಾ 8 ವಲಯಗಳಲ್ಲಿ ಒಟ್ಟು 2199 ಅರ್ಜಿಗಳು ವಿಲೇವಾರಿಗೆ ಬಾಕಿಯಿದ್ದು, ದಕ್ಷಿಣ ವಲಯ ವ್ಯಾಪ್ತಿಯಲ್ಲಿ 317 ಅರ್ಜಿಗಳು ವಿಲೇವಾರಿಗೆ ಬಾಕಿಯಿದೆ. ಈ ಪೈಕಿ ದಕ್ಷಿಣ ವಲಯದ ಎಲ್ಲಾ ನಾಗರಿಕರು ಎಲ್ಲಾ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ, ತಮ್ಮ ಆಸ್ತಿಗಳಿಗೆ ಖಾತೆ ಹಾಗೂ ಖಾತೆಗೆ ಸಂಬಂಧಿಸಿದ ಎಲ್ಲಾ ಕೆಲಸನ್ನು ಪೂರ್ಣಗೊಳಿಸಿಕೊಳ್ಳಲು ವಲಯ ಆಯುಕ್ತರಾದ ಜಯರಾಮ್ ರಾಯ್ಪುರ ತಿಳಿಸಿದ್ರು