Daily Horoscope
✕

ಅರೆಭಾಷೆಯಂತಹ ಪ್ರಾದೇಶಿಕ ಭಾಷೆ ಕನ್ನಡವನ್ನು ಶ್ರೀಮಂತಗೊಳಿಸಿದೆ: ಸಿದ್ದರಾಮಯ್ಯ

Sampriya
ಭಾನುವಾರ, 30 ನವೆಂಬರ್ 2025 (18:04 IST)
Photo Credit X
ಬೆಂಗಳೂರು: ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು ಲಕ್ಷಕ್ಕೂ ಹೆಚ್ಚಿದೆ. ಇವರು 1882ನೇ ಗೆಜೆಟ್ ಬಂದಾಗ ಸಕಲೇಶಪುರದಲ್ಲಿದ್ದು, ಬರಗಾಲದ ಸಂದರ್ಭದಲ್ಲಿ ಹೇಮಾವತಿ ನದಿ ಬತ್ತಿದಾಗ ಪಕ್ಕದ ಜಿಲ್ಲೆ ಸುಳ್ಯಕ್ಕೆ ಬಂದು ನೆಲೆಯೂರುತ್ತಾರೆ. ತುಳು, ಕೊಂಕಣಿ ಜೊತೆಗೆ ಕನ್ನಡ ಸೇರಿ ಅರೆಭಾಷೆಯಾಗಿದೆ. ಹೋಗುತ್ತೇನೆ ಎನ್ನುವುದು ವೋನೆ, ಬರುತ್ತೇನೆ ಎನ್ನುವುದು ಬನೇ ಎಂದು ಹೇಳುತ್ತಾರೆ. ಹೀಗೆ ಕೆಲವು ಅಕ್ಷರಗಳು ಬಿಟ್ಟುಹೋಗಿ ಅರೆಭಾಷೆಯಾಗಿದೆ. ಮೂಲತ: ಗೌಡ ಸಮುದಾಯಕ್ಕೆ ಸೇರಿರುವ ಇವರನ್ನು ಅರೆಭಾಷೆ ಗೌಡರು ಎನ್ನುತ್ತಾರೆ. ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿಯಾಗಿದೆ. 

ಅರೆಭಾಷಿಕರಾಗಿದ್ದ ಕುರುಂಜಿ ವೆಂಕಟರಮಣ ಗೌಡರು ನನಗೆ ಪರಿಚಿತರು. ಕರ್ನಾಟಕದಲ್ಲಿ ಸುಮಾರು 230 ಸಣ್ಣ ಭಾಷೆಗಳಿವೆ. ಇವೆಲ್ಲವೂ ಕನ್ನಡದಿಂದಲೇ ಹುಟ್ಟಿದ್ದು, ಅರೆಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಅಕಾಡೆಮಿ ಮಾಡಲಿ ಎಂದು ಆಶಿಸುತ್ತೇನೆ. 

ಭಾಗಮಂಡಲದಲ್ಲಿ ನಾಡಗೌಡ ಸಮುದಾಯಕ್ಕೆ ಒಂದು ಕೋಟಿ ರೂ.ಗಳನ್ನು ಹಿಂದೆ ಒದಗಿಸಲಾಗಿತ್ತು. ಪ್ರಸ್ತುತ ಇರುವ 50 ಲಕ್ಷ ರೂ.ಬೇಡಿಕೆಯನ್ನು ಸಹ ಈಡೇರಿಸಲಾಗುವುದು. ಇತರೆ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಒದಗಿಸಲಾಗುವುದು. 

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆ ಇದ್ದು, ಇದನ್ನು ಈಡೇರಿಸಲಾಗುವುದು. 
ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿಗೆ ಭಾಜನರಾದ ಕೆ.ಆರ್.ಗಂಗಾಧಾರ, ಯು. ಪಿ.ಶಿವಾನಂದ ಹಾಗೂ ಡಿ.ಎಸ್.ಆನಂದ ಅವರಿಗೆ ಸರ್ಕಾರದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಲಿಡೇ ಮೂಡ್ ಆನ್… ಎಸ್ಐಅರ್ ಪ್ರತಿಭಟನೆ ನಡುವೆ ವಿದೇಶಕ್ಕೆ ಹಾರಿದ ರಾಹುಲ್ ಗಾಂಧಿಗೆ ಬಿಜೆಪಿ ಟಾಂಗ್

ಮುಚ್ಚಿದ ಕೋಣೆಯೊಳಗೆ ನಡೆಯುತ್ತಿತ್ತು ಪತಿಯ ವಿಕೃತಿ: ಈತ ಮಾಡುತ್ತಿದ್ದ ಕೆಲಸ ನೋಡಿದರೆ ನೀವೂ ಶಾಕ್ ಆಗ್ತೀರಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ರಸ್ತೆಯಲ್ಲೇ ಯುವತಿಯನ್ನು ಗುಂಡಿಕ್ಕಿ ಕೊಂದ ಮಾಜಿ ಪ್ರಿಯಕರ: ಭೀಕರ ದೃಶ್ಯ ಇಲ್ಲಿದೆ Video

ನಿಮ್ಮನ್ನು ಉದ್ದಾರ ಮಾಡಿದ್ರೆ ದಲಿತರ ಉದ್ದಾರ ಮಾಡಿದಂಗಾ…ಪ್ರಿಯಾಂಕ್ ಖರ್ಗೆ ವಿರುದ್ಧ ಜೆಡಿಎಸ್ ಟ್ವೀಟ್ ವಾರ್

ಮುಂದಿನ ಸುದ್ದಿ
Show comments