Select Your Language

Notifications

webdunia
webdunia
webdunia
webdunia

ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯಕ್ಕೆ ಸೂಕ್ತ ನ್ಯಾಯ: ಎಚ್.ಡಿ.ದೇವೇಗೌಡರು

ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯಕ್ಕೆ ಸೂಕ್ತ ನ್ಯಾಯ: ಎಚ್.ಡಿ.ದೇವೇಗೌಡರು
ಶಿವಮೊಗ್ಗ , ಸೋಮವಾರ, 17 ಅಕ್ಟೋಬರ್ 2016 (12:57 IST)
ದೇಶಕ್ಕೆ ಪ್ರಾದೇಶಿಕ ಪಕ್ಷಗಳ ಅವಶ್ಯಕತೆ ಇದೆ. ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯಕ್ಕೆ ಸೂಕ್ತ ನ್ಯಾಯ ಸಿಗಲು ಸಾಧ್ಯ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಅಭಿಪ್ರಾಯಪಟ್ಟರು.
 
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.
 
ಪ್ರದೇಶಿಕ ಪಕ್ಷಗಳ ಅಗತ್ಯತೆ ಕುರಿತು ಸಾರ್ವಜನಿಕರಲ್ಲಿ ಅಗತ್ಯ ಅರಿವಿದೆ. ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯಕ್ಕೆ ಸೂಕ್ತ ನ್ಯಾಯ ಸಿಗಲು ಸಾಧ್ಯ ಎಂದು ಹೇಳಿದರು.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು, ಅಧಿಕಾರದ ಗದ್ದುಗೆ ಹಿಡಿಯಲೇ ಬೇಕು ಎಂದು ಪಣ ತೊಟ್ಟಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಾಮೂಹಿಕ ಅತ್ಯಾಚಾರ, ಆರೋಪಿಗಳಲ್ಲಿ ಬಿಜೆಪಿ ನಾಯಕನ ಪುತ್ರ