ನವದೆಹಲಿ: ಕೇಂದ್ರ ಸರ್ಕಾರ ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ವ್ಯಾಕ್ಸಿನ್ ನೀಡಲು ಸೂಚನೆ ನೀಡಿದೆ. ಅದರಂತೆ ಅರ್ಹರು ಏಪ್ರಿಲ್ 28 ರಿಂದ ನೋಂದಣಿ ಮಾಡಿಕೊಳ್ಳಬಹುದಾಗಿದೆ.
18 ವರ್ಷ ಮೇಲ್ಪಟ್ಟ ನಾಗರಿಕರು ಏಪ್ರಿಲ್ 28 ರಿಂದ ಕೊವಿನ್ ವೆಬ್ ಸೈಟ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ನೊಂದಾಯಿಸಿಕೊಂಡು ಕೊರೋನಾ ವ್ಯಾಕ್ಸಿನ್ ಪಡೆದುಕೊಳ್ಳಬಹುದು. ನೇರವಾಗಿ ಸೆಂಟರ್ ಗೆ ತೆರಳಿ ನೋಂದಣಿ ಮಾಡಿಕೊಳ್ಳದೇ ವ್ಯಾಕ್ಸಿನ್ ಪಡೆಯಲು ಅವಕಾಶವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಮೊನ್ನೆಯಷ್ಟೇ ಕೇಂದ್ರ 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ವ್ಯಾಕ್ಸಿನ್ ಪಡೆದುಕೊಳ್ಳಲು ದಿನಾಂಕ ನಿಗದಿ ಮಾಡಿತ್ತು. ಆದರೆ ಅದಾದ ಬಳಿಕ ನೋಂದಣಿ ಬಗ್ಗೆ ಗೊಂದಲಗಳಿತ್ತು. ಅದಕ್ಕೀಗ ಟ್ವಿಟರ್ ಮೂಲಕ ಕೇಂದ್ರ ಸ್ಪಷ್ಟನೆ ನೀಡಿದೆ.