Select Your Language

Notifications

webdunia
webdunia
webdunia
webdunia

ಹುಬ್ಬಳಿ ಕಾರ್ಪೋರೇಟರ್ ಮಗಳ ಭೀಕರ ಹತ್ಯೆ

Hubballi Corporator Daughter

Sampriya

ಹುಬ್ಬಳ್ಳಿ , ಗುರುವಾರ, 18 ಏಪ್ರಿಲ್ 2024 (19:15 IST)
Photo Courtesy X
ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ ಕಾರ್ಪೋರೇಟರ್ ಮಗಳನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ  ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ನಡೆಸಿದೆ.

ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ವಿದ್ಯಾರ್ಥಿ  ಫೈಜಲ್‌ 9 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಳನ್ನು ಕಾಲೇಜು ಆವರಣದಲ್ಲೇ 9ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.  ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫೈಜಲ್‌ನ ಪ್ರೀತಿ ನಿರಾಕರಿಸಿದ್ದಕ್ಕೆ  ಕೊಲೆ ಮಾಡಿದ್ದಾನೆ ಎನ್ನಲಾಗಿದೆ . ಕೊಲೆ ಮಾಡಿ ಪರಾರಿಯಾಗುತ್ತಿದ್ದಾಗ ಫೈಜಲ್‌ನನ್ನು ಅಲ್ಲಿದ್ದ ವ್ಯಕ್ತಿಗಳು ಹಿಡಿದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಈಗ ಫೈಜಲ್‌ನನ್ನು ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಐ‍ಪಿಎಲ್‌ ಬೆಟ್ಟಿಂಗ್‌ನಲ್ಲಿ ಸಾಲ: ಪತ್ನಿ, ಮಕ್ಕಳಿಗೆ ವಿಷವಿಕ್ಕಿಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ