Select Your Language

Notifications

webdunia
webdunia
webdunia
webdunia

ವಿವಾಹಿತನನ್ನು ಅಟ್ಟಾಡಿಸಿ ಹೊಡೆದ ಕೊಂದ ಪ್ರೇಯಸಿಯ ಸಂಬಂಧಿಕರು; ಕಾರಣ ಏನು ಗೊತ್ತಾ

Kolara Lover Boy Stabed To Death, Kolara Crime Rate, Karnataka Crime Case

Sampriya

ಕೋಲಾರ , ಭಾನುವಾರ, 5 ಜನವರಿ 2025 (11:21 IST)
ಕೋಲಾರ: ಕೋಲಾರದ ನೂರ್ ನಗರದಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯ ಮನೆಗೆ ಹೋಗಿ ಹಿಂತಿರುಗುತ್ತಿದ್ದಾಗ ಆಕೆಯ ಸಂಬಂಧಿಕರು ಹಾಗೂ ಸ್ಥಳೀಯರು ಅಟ್ಟಾಡಿಸಿ ಹೊಡೆದು ಹತ್ಯೆಗೈದ ಘಟನೆ ಶನಿವಾರ ಮಧ್ಯರಾತ್ರಿ ನಡೆದಿದೆ.

ಉಸ್ಮಾನ್ ಕೊಲೆಯಾದ ವ್ಯಕ್ತಿ. ಆತ ತನ್ನ ಪ್ರೇಯಸಿ ಮನೆಗೆ ಹೋಗಿ ಬರುವಾಗ ಆಕೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ಅಟ್ಟಾಡಿಸಿ ಹೊಡೆದಿದ್ದಾರೆ. ಬಳಿಕ ಪೊಲೀಸರು ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆತ ಸಾವನ್ನಪ್ಪಿದ್ದಾನೆ.

ಐದು ವರ್ಷಗಳ ಹಿಂದೆ ಉಸ್ಮಾನ್ ಎಂಬಾತ ಜಬೀನ್ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಆಕೆಗೆ ಕಿಡ್ನಿ ವಿಫಲವಾಗಿ ಅನಾರೋಗ್ಯದಿಂದ ಬಳಲುತ್ತಿದ್ದು, ಈ ವೇಳೆ ಆರೋಗ್ಯ ವಿಚಾರಿಸಲು ಬಂದಿದ್ದ ಜಬೀನಾ ಸಂಬಂಧಿ ಯುವತಿಯೊಂದಿಗೆ ಉಸ್ಮಾನ್‍ಗೆ ಪ್ರೀತಿಯಾಗಿದೆ. ಈ ವಿಷಯ ತಿಳಿದು ಆತನ ಪತ್ನಿ ಮಹಿಳಾ ಠಾಣೆಗೆ ದೂರು ನೀಡಿದ್ದಳು. ಬಳಿಕ ತನ್ನ ಪತಿಯಿಂದ ದೂರಾಗಿ ತವರು ಮನೆ ಸೇರಿದ್ದಳು ಎಂದು ತಿಳಿದು ಬಂದಿದೆ.

ಕೊಲೆಯಾದ ಉಸ್ಮಾನ್ ಕಳೆದ ರಾತ್ರಿ ತನ್ನ ಪ್ರೇಯಸಿಯ ಮನೆಗೆ ತೆರಳಿದ್ದ. ಅಲ್ಲದೇ ಆಕೆಯನ್ನು ಮದುವೆ ಮಾಡಿಕೊಡುವಂತೆ ಹೇಳಿದ್ದ. ಇದರಿಂದ ಆತ ವಾಪಸ್ ತೆರಳುತ್ತಿದ್ದಾಗ ಯುವತಿಯ ಕುಟುಂಬಸ್ಥರು ಹಾಗೂ ಸ್ಥಳೀಯರು, ಉಸ್ಮಾನ್‍ನನ್ನು ಏರಿಯಾದಲ್ಲಿ ಅಟ್ಟಾಡಿಸಿ ಹಲ್ಲೆ ನಡೆಸಿದ್ದರು. ಗಲ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಬರಿಮಲೆ ಯಾತ್ರೆ ವೇಳೆ ಮಸೀದಿಗೆ ಹೋಗಬೇಡಿ: ವೃತಧಾರಿಗಳಿಗೆ ಬಿಜೆಪಿ ಶಾಸಕ ರಾಜಾ ಸಿಂಗ್‌ ಕರೆ