ಬರ ಮರೆತು ರೆಸಾರ್ಟ್‍ನಲ್ಲಿ ಸಿಎಂ ವಿಶ್ರಾಂತಿ!

Webdunia
ಶುಕ್ರವಾರ, 10 ಮೇ 2019 (17:23 IST)
ಬರಗಾಲದಿಂದ ತತ್ತರಿಸುತ್ತಿರುವ, ಕುಡಿಯುವ ನೀರಿಗೆ ಹಾಹಾಕಾರ ಪಡುತ್ತಿರುವ ಜನರ ಆರೋಗ್ಯ ವಿಚಾರಿಸುವ ಬದಲು ರಾಜ್ಯದ ಮುಖ್ಯಮಂತ್ರಿ ರೆಸಾರ್ಟ್‍ನಲ್ಲಿ ವಿಶ್ರಾಂತಿ ತಗೆದುಕೊಳ್ಳುತ್ತಿದ್ದಾರೆ. ಅವರ ಮಂತ್ರಿಗಳು ಚುನಾವಣೆಯಲ್ಲಿ ಬ್ಯೂಸಿಯಾಗಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಟೀಕೆ ಮಾಡಿದ್ದಾರೆ.

ಚಿಂಚೋಳಿ ವಿಧಾನಸಭಾ ಕ್ಷೇತ್ರದ ವಿವಿಧ ಹಳ್ಳಿಗಳಲ್ಲಿ ಡಾ. ಅವಿನಾಶ್ ಜಾಧವ್ ಪರ ಪ್ರಚಾರ ನಡೆಸಿದ ಆರ್. ಅಶೋಕ ಮೈತ್ರಿ ಸರಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ನಮ್ಮ ಪಕ್ಷದ ಆಂತರಿಕ ಸಮೀಕ್ಷೆಯ ಪ್ರಕಾರ ರಾಜ್ಯದಲ್ಲಿ ಬಿಜೆಪಿಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, 22 ಲೋಕಸಭಾ ಸ್ಥಾನಗಳಲ್ಲಿ ಗೆಲವು ಸಾಧಿಸಲಿದ್ದೇವೆ ಎಂದರು. 

ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿಯಿದೆ, ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಎಲ್ಲರೂ ಬ್ಯೂಸಿ ಇದ್ದರು. ಆದರೆ ಈಗ ಅವಕಾಶ ಇದ್ದರೂ ಬರ ನಿರ್ವಹಣೆ ಮಾಡುತ್ತಿಲ್ಲ. ರಾಜ್ಯದ ಎಲ್ಲಾ ಸಚಿವರು ಚಿಂಚೋಳಿಗೆ ಬಂದು ಕುಳಿತಿದ್ದಾರೆ.

ಕಳೆದ 6 ತಿಂಗಳ ಹಿಂದಿನಿಂದ ಬರ ನಿರ್ವಹಣೆಗೆ ತಯಾರಿ ಮಾಡಿಕೊಳ್ಳಬೇಕಾಗಿತ್ತು. ಆದರೆ, ಯಾವುದೇ ತಯಾರಿ ನಡೆಸದೆ ಈಗ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರಕಾರದ ಮೇಲೆ ಬೆರಳು ತೋರಿಸುತ್ತಿದ್ದಾರೆ. ಕುಣಿಯಲು ಬಾರದವರು ನೆಲ ಡೊಂಕು ಎನ್ನುವಂತಿದೆ. ನಿಮಗೆ ಕೆಲಸ ಮಾಡಲಾಗದೆ ಕೇಂದ್ರದ ವಿರುದ್ಧ ಬೆರಳು ತೋರಿಸುವಲ್ಲಿ ನಿಸ್ಸೀಮರಾಗಿದ್ದೀರಿ ಎಂದು ದೂರಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments