Select Your Language

Notifications

webdunia
webdunia
webdunia
webdunia

ಕಾವೇರಿ ನೀರು ಬಿಡಿಸಿ: ಪ್ರಧಾನಿಗೆ ಸ್ಟಾಲಿನ್‌ ಮನವಿ

Kaveri water
tamilnadu , ಭಾನುವಾರ, 6 ಆಗಸ್ಟ್ 2023 (20:20 IST)
ಕರ್ನಾಟಕ ಬಾಕಿ ಉಳಿಸಿಕೊಂಡಿರುವ 28.8 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಧಾನಿ ಸೂಚಿಸಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತಾಗಿ ಪತ್ರ ಬರೆದಿರುವ ಅವರು ಪ್ರಧಾನಿ ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದಾರೆ. ಬಿಳಿಗುಂಡ್ಲು ಬಳಿ ಉಭಯ ರಾಜ್ಯಗಳು ಹಂಚಿಕೊಳ್ಳಬೇಕಾದ ನೀರಿನ ಪ್ರಮಾಣವನ್ನು ಸುಪ್ರೀಂಕೋರ್ಟ್‌ ನಿರ್ಧರಿಸಿದೆ. ದುರಾದೃಷ್ಟವಶಾತ್‌ ಈ ತೀರ್ಪನ್ನು ಕರ್ನಾಟಕ ಸರ್ಕಾರ ಮಾನ್ಯ ಮಾಡುತ್ತಿಲ್ಲ. 2023-24ನೇ ಸಾಲಿನಲ್ಲಿ ಕರ್ನಾಟಕ 11.6 TMC ನೀರನ್ನು ಮಾತ್ರ ಬಿಡುಗಡೆ ಮಾಡಿದೆ. ಕರ್ನಾಟಕ ಒಟ್ಟು 40.4 TMC ನೀರು ಬಿಡುಗಡೆ ಮಾಡಬೇಕಿತ್ತು. ಹಾಗಾಗಿ ಉಳಿದ 28.8 TMC ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಮೋದಿ ಅವರು ಸೂಚಿಸಬೇಕು. ಕರ್ನಾಟಕ ತನ್ನ 4 ಅಣೆಕಟ್ಟುಗಳಲ್ಲಿ 91 TMC ನೀರನ್ನು ಹೊಂದಿದೆ. ಆದರೆ ಮೆಟ್ಟೂರು ಅಣೆಕಟ್ಟೆಯಲ್ಲಿ ಕೇವಲ 26.6 ಟಿಎಂಸಿ ನೀರು ಇದೆ. ಕುಡಿಯುವ ನೀರು ಹಾಗೂ ಇನ್ನಿತರ ಅವಶ್ಯಕತೆಗಳಿಗೆ ಹೋಲಿಸಿದರೆ ಇಲ್ಲಿ ಸಾಕಾಗುವಷ್ಟಿಲ್ಲ ಎಂದಿದ್ದಾರೆ. ಈಗಾಗಲೇ ಈ ಬಗ್ಗೆ ಕೇಂದ್ರ ಜಲಶಕ್ತಿ ಮಂತ್ರಿ ಅವರಿಗೆ ನಾವು ಮನವಿ ಸಲ್ಲಿಸಿದ್ದೇವೆ. ಕೇಂದ್ರ ಸರ್ಕಾರ ಈಗಾಗಲೇ ಅಕ್ಕಿಯ ರಫ್ತು ನಿಷೇಧ ಮಾಡಿದೆ. ಅದೇ ರೀತಿ ಕಾವೇರಿ ಸೀಮೆಯಲ್ಲಿ ಬೆಳೆಯುವ ಭತ್ತವನ್ನು ರಕ್ಷಣೆ ಮಾಡಲು ನೀರು ಬಿಡುವಂತೆ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆತಂಕ ಹುಟ್ಟಿಸಿದ ಸಿಲಿಂಡರ್ ಮಾದರಿ ವಸ್ತು!