Select Your Language

Notifications

webdunia
webdunia
webdunia
webdunia

‘ಕೈ’ ಪದಾಧಿಕಾರಿಗಳ ಪಟ್ಟಿ ರಿಲೀಸ್​​​​​

Release list of hand officers
bangalore , ಭಾನುವಾರ, 10 ಏಪ್ರಿಲ್ 2022 (18:14 IST)
ಕೊನೆಗೂ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ ಪಟ್ಟಿಯನ್ನು ಎಐಸಿಸಿ ಅಧಿಕೃತ ಘೋಷಣೆ ಮಾಡಿದೆ. ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನೇಮಕಾತಿಗೆ ಕಾಂಗ್ರೆಸ್ ಹೈಕಮಾಂಡ್ ಅಂಕಿತ ಹಾಕಿದೆ. ಚುನಾವಣೆ ವರ್ಷದಲ್ಲೇ ಎಐಸಿಸಿ ನೇಮಕಗೊಳಿಸಿದ್ದು, ಮೊದಲ ಹಂತದಲ್ಲಿ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ನೇಮಕ ಮಾಡಿದೆ. 40 ಮಂದಿಗೆ ಕೆಪಿಸಿಸಿ ಉಪಾಧ್ಯಕ್ಷ ಸ್ಥಾನ ಹಾಗೂ 109 ಮಂದಿಗೆ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ. ಮಾಜಿ ಸಚಿವ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಮಾನಾಥ ರೈ, ಮಾಜಿ ಸಚಿವ ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ವಿಧಾನ ಪರಿಷತ್ ಮಾಜಿ ಸದಸ್ಯ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಮತ್ತು ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್ ಅವರನ್ನು ಕೆಪಿಸಿಸಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

161 ಅಡಿ ಎತ್ತರದ ಹನುಮಾನ್​​ ವಿಗ್ರಹ ಲೋಕಾರ್ಪಣೆ