Publish Date: Sat, 05 Aug 2023 (16:04 IST)
Updated Date: Sat, 05 Aug 2023 (14:07 IST)
ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದ SC ಕಾಲೋನಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಮೂವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ. ಈ ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ರು. ಸಿಎಂ ಸೂಚನೆಯ ಮೇರೆಗೆ ದುರಂತದಲ್ಲಿ ಮೃತರಾದ ಮಂಜುಳಾ, ರಘು ಹಾಗೂ ಪ್ರವೀಣ್ ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಗಳಂತೆ ಪರಿಹಾರ ಮಂಜೂರು ಮಾಡಿ, ಜಿಲ್ಲಾಧಿಕಾರಿಗಳಿಗೆ ಒಟ್ಟು 15 ಲಕ್ಷ ರೂ ಬಿಡುಗಡೆ ಮಾಡಲಾಗಿದೆ. ಜುಲೈ 31ರಂದು ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ SC ಕಾಲೋನಿಯಲ್ಲಿ ಕುಡಿಯುವ ನೀರು ಕಲುಷಿತಗೊಂಡಿದ್ದರಿಂದ ಅಲ್ಲಿನ ನಿವಾಸಿಗಳು ಅಸ್ವಸ್ಥಗೊಂಡು ಮೂವರು ಮೃತಪಟ್ಟಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿ ಹಾಗೂ ಜಿಲ್ಲಾಧಿಕಾರಿಗಳು ಸಲ್ಲಿಸಿದ ವರದಿಯನ್ನು ಆಧರಿಸಿ ಪರಿಹಾರ ಬಿಡುಗಡೆ ಮಾಡಲಾಗಿದೆ.