Publish Date: Mon, 10 Apr 2023 (15:30 IST)
Updated Date: Mon, 10 Apr 2023 (15:23 IST)
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ಮಾಜಿ ಸಚಿವ K.S. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ 224 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಹಾಕೇ ಹಾಕ್ತೇವೆ. ಈಗಾಗಲೇ 224 ಕ್ಷೇತ್ರದ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚೆ ನಡೆದಿದೆ. ಒಂದೊಂದು ಕ್ಷೇತ್ರಕ್ಕೆ ಮೂರು-ಮೂರು ಅಭ್ಯರ್ಥಿಗಳ ಹೆಸರನ್ನು ಪಟ್ಟಿಯಲ್ಲಿ ಕಳುಹಿಸಿಕೊಟ್ಟಿದ್ದಾರೆ. ನಿನ್ನೆ ಮೊನ್ನೆ ಕೇಂದ್ರದ ಚುನಾವಣಾ ಸಮಿತಿಯವರು ಕುಳಿತು ಚರ್ಚೆ ಮಾಡಿದ್ದಾರೆ. ಇವತ್ತು ಸಂಜೆ 170-180 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡೋದಾಗಿ ನಮ್ಮ ನಾಯಕರಾದ ಯಡಿಯೂರಪ್ಪ ಹೇಳಿದ್ದಾರೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲದೇ ನಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗುತ್ತದೆ. ನಮ್ಮ ಕಾರ್ಯಕರ್ತರ ಅಪೇಕ್ಷೆಗೆ ತಕ್ಕಂತೆ ಅಭ್ಯರ್ಥಿಗಳನ್ನು ಹಾಕ್ತಾರೆ ಎಂದಿದ್ದಾರೆ