Publish Date: Thu, 14 Sep 2023 (18:03 IST)
Updated Date: Thu, 14 Sep 2023 (19:21 IST)
ಬಹುಕೋಟಿ ಕೌಶಲ್ಯಾಭಿವೃದ್ಧಿ ಹಗರಣದಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡುಗೆ ಹೈಕೋರ್ಟ್ ರಿಲೀಫ್ ಕೊಟ್ಟಿದೆ.. ನಾಯ್ಡು ವಿರುದ್ಧದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಆಂಧ್ರಪ್ರದೇಶ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇದು ಟಿಡಿಪಿ ಮುಖ್ಯಸ್ಥರೂ ಆಗಿರುವ ನಾಯ್ಡುಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಸಿಐಡಿ ಸಲ್ಲಿಸಿರುವ ಚಂದ್ರಬಾಬು ನಾಯ್ಡು ಅವರ ಕಸ್ಟಡಿ ಅರ್ಜಿಯನ್ನು ಸೆಪ್ಟೆಂಬರ್ 18ರ ಸೋಮವಾರದವರೆಗೆ ವಿಚಾರಣೆ ನಡೆಸದಂತೆ ವಿಜಯವಾಡ ನ್ಯಾಯಾಲಯಕ್ಕೆ ನ್ಯಾಯಾಲಯ ಸೂಚಿಸಿದೆ. ಮುಂದಿನ ಸೋಮವಾರದವರೆಗೆ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳದಂತೆ ಸಿಐಡಿಗೆ ಸೂಚಿಸಲಾಗಿದ್ದು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿದೆ.