Select Your Language

Notifications

webdunia
webdunia
webdunia
webdunia

ರಾಜ್ಯದ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿ ಮಾಡಲು ಧಾರ್ಮಿಕ ಪರಿಷತ್ ನಿರ್ಧಾರ

ರಾಜ್ಯದ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿ ಮಾಡಲು ಧಾರ್ಮಿಕ ಪರಿಷತ್ ನಿರ್ಧಾರ
bangalore , ಸೋಮವಾರ, 4 ಅಕ್ಟೋಬರ್ 2021 (19:59 IST)
ರಾಜ್ಯದ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿ ಮಾಡಲು ಧಾರ್ಮಿಕ ಪರಿಷತ್ ತೀರ್ಮಾನಿಸಿದೆ. ಬರ್ಮುಡಾ, ತುಂಡುಡುಗೆಗಳನ್ನು ನಿಷೇಧಿಸಲಾಗಿದೆ. ಮೊದಲ ಹಂತದಲ್ಲಿ 216 ದೇವಾಲಯಗಳಲ್ಲಿ ನಿಯಮ ಜಾರಿಗೆ ಬರಲಿದೆ.
 
ಎ ಗ್ರೇಡ್ ದೇವಾಲಯಗಳಲ್ಲಿ ಹಂತಹಂತವಾಗಿ ವಸ್ತ್ರಸಂಹಿತೆ ಜಾರಿ ಮಾಡಲಾಗುವುದು.
 
ನಂತರ ಉಳಿದ ದೇವಾಲಯಗಳಿಗೂ ವಿಸ್ತರಿಸಲಾಗುವುದು. ಕಟೀಲು ದುರ್ಗಾಪರಮೇಶ್ವರಿ, ಪೊಳಲಿ ರಾಜರಾಜೇಶ್ವರಿ ದೇವಾಲಯದಲ್ಲಿ ಅಕ್ಟೋಬರ್ 3 ರಿಂದ ವಸ್ತ್ರ ಸಂಹಿತೆ ಜಾರಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನೂ ಅನೇಕ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ಬರಲಿದೆ. ಈಗಾಗಲೇ ಹಲವು ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಯಲ್ಲಿದೆ. ಬರ್ಮುಡಾ, ತುಂಡುಡುಗೆಗಳನ್ನು ಧರಿಸಿ ದೇವಾಲಯಕ್ಕೆ ಬರುವಂತಿಲ್ಲ.
 
ದೇವಸ್ಥಾನಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ವಸ್ತ್ರಸಂಹಿತೆ ಪಾಲಿಸಲಾಗುತ್ತದೆ. ರಾಜ್ಯದ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ದೇಗುಲಕ್ಕೆ ಬರುವಾಗ ಸಾಂಪ್ರದಾಯಕ ಉಡುಗೆ ಧರಿಸಿ ಬರುವಂತೆ ತಿಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ