Webdunia - Bharat's app for daily news and videos

Install App

ಮತೀಯ ಸಂಘಟನೆಗಳು ನನ್ನ ವಿರುದ್ಧವಾಗಿವೆ: ಸಚಿವ ರೈ ತಿರುಗೇಟು

Webdunia
ಸೋಮವಾರ, 19 ಜೂನ್ 2017 (13:12 IST)
ಮತೀಯ ಸಂಘಟನೆಗಳು ನನ್ನ ವಿರುದ್ಧವಾಗಿವೆ. ದಕ್ಷಿಣ ಕನ್ನಡದಲ್ಲಿ ಹಿಂಸಾಚಾರ ಘಟನೆಗಳಿಗೆ ಮತೀಯ ಸಂಘಟನೆಗಳೇ ಕಾರಣವಾಗಿವೆ ಎಂದು ಸಚಿವ ರಮಾನಾಥ್ ರೈ ತಿರುಗೇಟು ನೀಡಿದ್ದಾರೆ.
 
ಜಿಲ್ಲೆಗೆ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ ಇದನ್ನು ಸಹಿಸಬೇಕಾ? ಪೊಲೀಸರಿಗೆ ದುಷ್ಟ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವುದು ತಪ್ಪಾ ಎಂದು ಪ್ರಶ್ನಿಸಿದ್ದಾರೆ.
 
ಬಂಟ್ವಾಳ, ಕಲ್ಲಡ್ಕ ನನ್ನ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ರಂಜಾನ್ ಸಂದರ್ಭದಲ್ಲಿ ಅಲ್ಪಸಂಖ್ಯಾತ ಯುವಕನನ್ನು ಹತ್ಯೆ ಮಾಡಲಾಯಿತು. ಇದಕ್ಕೆ ಯಾರು ಕಾರಣರು ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದರು.
 
ಕೊಲೆಗಡುಕರಿಗೆ ಆಶ್ರಯ ನೀಡಿದ್ದೇನೆ ಎನ್ನುವ ಆರೋಪಿಗಳನ್ನು ಬಿಜೆಪಿ ಮಾಡುತ್ತಿದೆ. ಒಂದು ವೇಳೆ ಕೊಲೆಗಡುಕರಿಗೆ ಆಶ್ರಯ ನೀಡಿರುವುದು ಸಾಬೀತುಪಡಿಸಿದಲ್ಲಿ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಘೋಷಿಸಿದರು.
 
ನಾನು ಅಲ್ಪಸಂಖ್ಯಾತರು ಮತ್ತು ಬಹುಸಂಖ್ಯಾತರ ವಿರೋಧದ ಮಧ್ಯೆಯೂ ಆರು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ್ದೇನೆ. ನಾನು ಜಾತ್ಯಾತೀತವಾದಿ ಎಂದು ಸಚಿವ ರಮಾನಾಥ್ ರೈ ಬಿಜೆಪಿ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.  
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments