Select Your Language

Notifications

webdunia
webdunia
webdunia
webdunia

ವ್ಯಾಪಾರ ನಿರ್ಬಂಧ ತೆರವು, 144 ಸೆಕ್ಷನ್‌ ಮುಂದುವರಿಕೆ?

ವ್ಯಾಪಾರ ನಿರ್ಬಂಧ ತೆರವು, 144 ಸೆಕ್ಷನ್‌ ಮುಂದುವರಿಕೆ?
ಮಂಗಳೂರು , ಸೋಮವಾರ, 8 ಆಗಸ್ಟ್ 2022 (13:25 IST)
ಮಂಗಳೂರು : 2 ಕೊಲೆಗಳಿಂದ ಬೆಚ್ಚಿಬಿದ್ದಿದ್ದ ದಕ್ಷಿಣ ಕನ್ನಡ  ಜಿಲ್ಲೆ ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿದೆ.
 
ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡೋ ನಿಟ್ಟಿನಲ್ಲಿ ವ್ಯಾಪಾರ ವಹಿವಾಟು ಹಾಗೂ ಜನರ ಓಡಾಟಕ್ಕೆ ಸಂಬಂಧಿಸಿದಂತ ಜಿಲ್ಲಾಡಳಿತ ಕೆಲವು ನಿರ್ಬಂಧ ಜಾರಿಗೊಳಿಸಿತ್ತು.

ಈ ನಿರ್ಬಂಧಗಳನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ಆದರೆ  ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿಯಲ್ಲಿರಲಿದೆ. ನಿಷೇಧಾಜ್ಞೆ ಆಗಸ್ಟ್ 14ರ ಮಧ್ಯರಾತ್ರಿವರೆಗೆ ಮುಂದುವರಿಯಲಿದೆ. ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

ಈ ಬಗ್ಗೆ ಮಾತಾಡಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲೆಯಲ್ಲಿ ನಿರ್ಮಾಣವಾಗಿದ್ದ ಬಿಗುವಿನ ವಾತಾವರಣ ತಿಳಿಯಾಗಿದ್ದು, ಶಾಂತಿ ಸುವ್ಯವಸ್ಥೆಯಲ್ಲಿ ಮಹತ್ತರ ಸುಧಾರಣೆಗಳಾಗಿವೆ.

ವ್ಯಾಪಾರ ವಹಿವಾಟುಗಳಿಗೆ, ಜನರ ಓಡಾಟಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಜಾರಿಗೊಳಿಸಲಾಗಿದ್ದ ನಿರ್ಬಂಧಗಳನ್ನು ಇದೇ 8 ರಿಂದ ಜಾರಿಯಾಗುವಂತೆ ಹಿಂಪಡೆಯಲಾಗಿದೆ. ಹಾಗಾಗಿ ಮದ್ಯ ಮಾರಾಟ ಮಳಿಗೆಗಳು ಸೇರಿದಂತೆ ಜಿಲ್ಲೆಯ ಎಲ್ಲ ಅಂಗಡಿಗಳು ಇನ್ನು ಮೊದಲಿನಂತೆಯೇ ವ್ಯಾಪಾರ ವಹಿವಾಟು ನಡೆಸಬಹುದು ಎಂದು ತಿಳಿಸಿದ್ದಾರೆ

 

 

 

 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಹೆಚ್ಚಾಗುತ್ತಾ ಕೋವಿಡ್ ಅಬ್ಬರ?