Select Your Language

Notifications

webdunia
webdunia
webdunia
webdunia

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಸಾಕ್ಷರತಾ ಇಲಾಖೆ ಎಂದು ಮರುನಾಮಕರಣ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಸಾಕ್ಷರತಾ ಇಲಾಖೆ ಎಂದು ಮರುನಾಮಕರಣ
bangalore , ಶನಿವಾರ, 25 ಜೂನ್ 2022 (20:21 IST)
ರಾಜ್ಯದ 'ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ'ಯನ್ನು 'ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ' ಎಂದು ಮರು ನಾಮಕರಣ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 12ನೇ ತರಗತಿ ವರೆಗಿನ ಶಿಕ್ಷಣವು ಶಾಲಾ ಶಿಕ್ಷಣ ವ್ಯಾಪ್ತಿಗೆ ಒಳಪಡುತ್ತದೆ ಎಂಬ ಅಂಶವನ್ನು 'ರಾಷ್ಟ್ರೀಯ ಶಿಕ್ಷಣ ನೀತಿ-2020'ರಲ್ಲಿ ತಿಳಿಸಿರುವ ಹಿನ್ನೆಲೆಯಲ್ಲಿ ಮರುನಾಮಕರಣ ಮಾಡಲಾಗಿದೆ ಎಂದಿದ್ದಾರೆ. ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿ 12ನೇ ತರಗತಿಯವರೆಗಿನ ಶಿಕ್ಷಣವು ಶಾಲಾ ಶಿಕ್ಷಣದ ವ್ಯಾಪ್ತಿಗೊಳಪಡುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿಯೂ ಈ ಅಂಶ ಪುನರುಚ್ಛರಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಪದನಾಮವನ್ನು ಬದಲಾವಣೆ ಮಾಡಲಾಗಿದೆ. ಹೀಗಾಗಿ ತಕ್ಷಣಕ್ಕೆ ಜಾರಿಗೆ ಬರುಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಂದು ಮರು ನಾಮಕರಣಗೊಳಿಸಿ ಆದೇಶಿಸಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಸಾಲುಮರದ ತಿಮ್ಮಕ್ಕನಿಗೆ ನಿವೇಶನ ಕ್ರಯ ಪತ್ರ ಹಸ್ತಾಂತರಿಸಿದ ಸಿಎಂ ಬೊಮ್ಮಾಯಿ