Publish Date: Sun, 14 May 2023 (09:45 IST)
Updated Date: Sun, 14 May 2023 (10:47 IST)
ದಾವಣಗೆರೆ : ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದು ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಪರಾಜಿತ ಅಭ್ಯರ್ಥಿ ಎಂ.ಪಿ ರೇಣುಕಾಚಾರ್ಯ ಘೋಷಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕೆಲಸ, ಕೋವಿಡ್ನಲ್ಲಿ ಜೀವ ಹಂಗು ತೊರೆದರೂ ಜನರು ಸೋಲಿಸಿದರು. ರಾಜಕೀಯದಿಂದ ನಿವೃತ್ತಿ ಪಡೆದು, ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಚುನಾವಣೆಗೆ ಬರುವುದಿಲ್ಲ ಎಂದು ಹೇಳಿದರು.
ಒಂದು ಸುತ್ತಿನಲ್ಲೂ ಮುನ್ನಡೆ ಸಾಧಿಸದೆ ಇರುವುದಕ್ಕೆ ರೇಣುಕಾಚಾರ್ಯ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಕ್ಷೇತ್ರದ ಜನರಿಗೆ ಹಗಲಿರುಳು ಕೆಲಸ ಮಾಡಿದೆ. ಆದರೂ ಈ ರೀತಿ ಸೋಲು ಆಯ್ತಲ್ಲ ಅಂತ ನೋವಿನಿಂದ ಕಣ್ಣೀರು ಹಾಕಿದರು.