Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ನಾಯಕರಿಗೆ ಬಹಿರಂಗ ಸವಾಲು ಹಾಕಿದ ರೇಣುಕಾಚಾರ್ಯ

ರೇಣುಕಾಚಾರ್ಯ

geetha

bangalore , ಗುರುವಾರ, 8 ಫೆಬ್ರವರಿ 2024 (21:06 IST)
ಬೆಂಗಳೂರು-ಸರ್ಕಾರ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಎಷ್ಟು ಅನುದಾನ ಬಿಡುಗಡೆ ಮಾಡಿದೆ ಎಂಬುದರ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಕಾಂಗ್ರೆಸ್ ನಾಯಕರಿಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಸವಾಲು ಹಾಕಿದ್ದಾರೆ.ಬೆಂಗಳೂರಿನ ಮಲ್ಲೇಶ್ವರಂನ ಪಕ್ಷದ ಕಚೇರಿಯಲ್ಲಿ ಚನ್ನಗಿರಿಯ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಅವರ ಪಕ್ಷ ಸೇರ್ಪಡೆಯಾದ ನಂತರ ಅವರು ಮಾಧ್ಯಮದವರು ಜೊತೆ ಮಾತನಾಡಿದರು.
 
ಯುಪಿಎ ಅವಧಿಯಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹಾಗೂ ಈಗಿನ ಪ್ರಧಾನಿ ನರೇಂದ್ರ ಮೋದಿ ಅವರ ಎನ್ ಡಿಎ ಸಮಯದಲ್ಲಿ ಕರ್ನಾಟಕಕ್ಕೆ ಎಷ್ಟೆಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಎಂಬುದರ ಕುರಿತು ಸಾರ್ವಜನಿಕ ಚರ್ಚೆಗೆ ಸಿದ್ದ ಎಂದು ಹೇಳಿದರು.ದೆಹಲಿಯಲ್ಲಿ ನಡೆದಿರುವುದು ಪ್ರತಿಭಟನೆಯಲ್ಲ. ಅದು ಕಾಂಗ್ರೆಸ್ ಕೃಪಾ ಪೋಷಕ ಪ್ರತಿಭಟನೆ.ದೆಹಲಿಯಲ್ಲಿ ಕರ್ನಾಟಕದ ಮಾನ ಮಾರ್ಯಾದೆ ಕಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರುಗಳು ರಾಜ್ಯದ ಜನತೆಯ ಕ್ಷೆಮೆ ಕೇಳಬೇಕು ಎಂದು ಒತ್ತಾಯ ಮಾಡಿದರು.
 
ಮೊದಲು ದೇಶ ವಿಭಜನೆಯ ಹೇಳಿಕೆ ನೀಡಿದವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ಇನ್ನು ಮುಂದೆ ಇಂತಹ ಹೇಳಿಕೆ ನೀಡುವವರು ಯಾರೇ ಆದರೂ ಅಂತಹವರನ್ನು ನೇಣಿಗೆ ಹಾಕಲಿ ಎಂದು ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿಯ ಸೈನ್ಯವನ್ನು ಸೋಲಿಸಲು ಐಎನ್‌ಡಿಐಎ ಕೂಟಕ್ಕೆ ಸಾಧ್ಯನಾ...?