Webdunia - Bharat's app for daily news and videos

Install App

ರೇಣುಕಾಚಾರ್ಯ ಸೋದರನ​​​​ ಪುತ್ರ ನಾಪತ್ತೆ..!

Webdunia
ಬುಧವಾರ, 2 ನವೆಂಬರ್ 2022 (16:24 IST)
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಹೋದರ ರಮೇಶ್‌ ಪುತ್ರ ನಾಪತ್ತೆ, ನಾಪತ್ತೆಯಾಗಿ 2 ದಿನವಾದ್ರೂ ಚಂದ್ರಶೇಖರ್‌ ಬಗ್ಗೆ ಸುಳಿವು ಸಿಕ್ಕಿಲ್ಲ. ಚಂದ್ರಶೇಖರ್ ನಾಪತ್ತೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ, ಅಣ್ಣನ ಮಗ ನಾಪತ್ತೆಯಾದ ಶಾಸಕ ರೇಣುಕಾಚಾರ್ಯ ಕಣ್ಣೀರು ಹಾಕಿದ್ದಾರೆ. ಚಂದ್ರಶೇಖರ್ ನ ಮೊಬೈಲ್ ಸ್ವಿಚ್ ಆಫ್ ಆಗಿ 48 ಗಂಟೆ ಕಳೆದಿದೆ. ಆದರೂ ಆತನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಸೇರಿ ಹಲವೆಡೆ ತೀವ್ರ ಹುಡುಕಾಟ ನಡೆಸುತ್ತಿದೆ. ಪ್ರಕರಣ ಗಂಭೀರವಾಗ್ತಿದ್ದಂತೆ ದಾವಣಗೆರೆ ಎಸ್ಪಿ ರಿಷ್ಯಂತ್ ಹೊನ್ನಾಳಿ ರೇಣುಕಾಚಾರ್ಯ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು, ಚಂದ್ರಶೇಖರ್ ನಾಪತ್ತೆ ಬಗ್ಗೆ ತನಿಖೆ ನಡೆಯುತ್ತಿದೆ. ಶಿವಮೊಗ್ಗದಿಂದ ನ್ಯಾಮತಿ ಕಡೆ ಬಂದಿರುವ ಬಗ್ಗೆ ಮಾಹಿತಿ ಇದೆ. ಏನಾಗುತ್ತಿದೆ ಎಂಬುದರ ಬಗ್ಗೆ ಸದ್ಯಕ್ಕೆ ಹೇಳೋದಕ್ಕೆ ಆಗಲ್ಲ, ಈ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದ್ರು. ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಚಂದ್ರಶೇಖರ್ ಅವರಿಗೆ ಭಾವುಕ ಸಂದೇಶ ಕಳುಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments