Daily Horoscope
✕

ಮೋದಿ ಮುಂದೆ ರಾಹುಲ್ ಗಾಂಧಿ ಜೀರೋ ಎಂದ ರೇಣುಕಾಚಾರ್ಯ

Webdunia
ಶುಕ್ರವಾರ, 5 ಆಗಸ್ಟ್ 2022 (14:50 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ರಾಹುಲ್ ಗಾಂಧಿ ಜೀರೋ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಮಾಡಿರುವುದು ಸಿದ್ದರಾಮಯ್ಯನವರ ಅಭಿಮಾನಿಗಳು.

ಕಾಂಗ್ರೆಸ್ನವರು ಈಗ ಭ್ರಮಾಲೋಕದಲ್ಲಿ ತೇಲಾಡುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ ಅಂದುಕೊಂಡಿದ್ದಾರೆ. ಅಲ್ಲಿ ಬಂದಿರುವ 60 ಪರ್ಸೆಂಟ್ ಜನ ಸಿದ್ದರಾಮಯ್ಯ ಅಭಿಮಾನಿಗಳು. ನಾನು ಸಿದ್ದರಾಮಯ್ಯನವರ ಬಗ್ಗೆ ಟೀಕೆ ಮಾಡಲ್ಲ. ಸಿದ್ದರಾಮಯ್ಯನವರ ಬಗ್ಗೆ ಇಟ್ಟಿರುವ ಗೌರವಕ್ಕೆ ಅಭಿಮಾನಿಗಳು ಬಂದಿದ್ದಾರೆ. ಆದರೆ ಅವರು ಕಾಂಗ್ರೆಸ್ ಓಟರ್ಸ್ ಅಲ್ಲ.

ಕಾಂಗ್ರೆಸ್ ಒಂದು ರೀತಿ ಸತ್ತೇ ಹೋಗಿದೆ. ರಾಜ್ಯದಲ್ಲಿ, ದೇಶದಲ್ಲಿ ಕಾಂಗ್ರೆಸ್ ಬಲಿಷ್ಟವಾಗಿದೆ. ಬಸವರಾಜ್ ಬೊಮ್ಮಾಯಿ ಕೊಟ್ಟ ಅನೇಕ ಕಾರ್ಯಕ್ರಮಗಳು ಜನಪರವಾಗಿವೆ. ಕಾಂಗ್ರೆಸ್ ಸಿದ್ದರಾಮೋತ್ಸವ ಕಾರ್ಯಕ್ರಮದ ಬಗ್ಗೆ ನಮಗೇನೂ ಭಯ ಇಲ್ಲ.

ಆ ಕಾರ್ಯಕ್ರಮ ವಿರೋಧ ಮಾಡಿದ್ದು ಕಾಂಗ್ರೆಸ್ನವರೇ ಹೊರತು, ನಾವಲ್ಲಾ. ಬಿಜೆಪಿ ಜನಪರ ಕಾರ್ಯಕ್ರಮಗಳ ಬಗ್ಗೆ ರಾಜ್ಯಾದ್ಯಂತ ಕಾರ್ಯಕ್ರಮ ಮಾಡಲಿದೆ. ಆ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ದಾವಣಗೆರೆಯಲ್ಲಿ ಮಾಡಲು ಸಿಎಂಗೆ ವಿನಂತಿ ಮಾಡುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments