Publish Date: Sun, 21 Jul 2019 (11:25 IST)
Updated Date: Sun, 21 Jul 2019 (11:26 IST)
ಬೆಂಗಳೂರು : ಸೋಮವಾರ ಸಿಎಂ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಹಿನ್ನಲೆ ಕಾಂಗ್ರಸ್ ನಾಯಕರಾದ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಹಾಗೂ ಸ್ವೀಕರ್ ರಮೇಶ್ ಕುಮಾರ್ ಅವರು ವಿಶ್ವಾಸ ಮತ ಯಾಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಆದರೆ ನಾಳೆನೂ ಚರ್ಚೆ ಮುಂದುವರಿದರೆ ಮತ್ತೊಮ್ಮೆ ಇವರು ವಚನ ಭ್ರಷ್ಟರಾಗುತ್ತಾರೆ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮನ್ನ ಪ್ರಚೋದನೆ ಮಾಡುವುದೇ ಮೈತ್ರಿ ಸರ್ಕಾರದ ಉದ್ದೇಶವಾಗಿದೆ. ನಾವು ಶಿಸ್ತಿನಿಂದ ಇದ್ದೇವೆ. ನಾವು ಯಾವ ಅಧಿಕಾರಕ್ಕೂ ಅಂಟಿಕೊಂಡಿಲ್ಲ. ಸಿಎಂ ಹೇಳುತ್ತಿರುತ್ತಾರೆ. ಆದರೆ ಅವರೇಕೆ ವಿಶ್ವಾಸ ಮತ ಯಾಚನೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು ಸಿಎಂ ರಾಜೀನಾಮೆ ಕೊಟ್ಟು ಹೋಗಲಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಡಿಕೆಶಿ ನಾಟಕ ಆಡುತ್ತಿದ್ದಾರೆ. ನಮ್ಮ ಮೇಲೆ ಸುಮ್ಮನೆ ಅರೋಪ ಮಾಡುತ್ತಿದ್ದಾರೆ. ಅವರಿಗೆ ಸಂಖ್ಯೆ ಬಲ ಇಲ್ಲ ಎಂದು ಗೊತ್ತು. ಅದಕ್ಕಾಗಿ ಅವರು ಈ ರೀತಿ ಮಾತಾನಾಡಿ ಸದನವನ್ನು ಮುಂದೂಡುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.