Daily Horoscope
✕

ಸ್ವಪಕ್ಷದ ವಿರುದ್ಧ ಮತ್ತೆ ಗುಡುಗಿದ ರೇಣುಕಾಚಾರ್ಯ

Webdunia
ಮಂಗಳವಾರ, 29 ಆಗಸ್ಟ್ 2023 (15:24 IST)
ದಾವಣಗೆರೆ : ಕರ್ನಾಟಕದಲ್ಲಿ ಹಲವು ನಾಯಕರು ಮೋದಿ ಮುಖ ತೋರಿಸಿ ಗೆಲ್ಲುತ್ತೇವೆ ಎನ್ನುವ ಭ್ರಮಾಲೋಕದಲ್ಲಿದ್ದಾರೆ. ರಾಜ್ಯ ನಾಯಕರ ಕೊಡುಗೆ ಏನ್ ಇದೆ? ಎಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಸ್ವಪಕ್ಷದ ವಿರುದ್ಧ ಕಿಡಿಕಾರಿದ್ದಾರೆ.

ಮೋದಿಯವರ ಜನಪ್ರಿಯ ಕಾರ್ಯಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತಿಲ್ಲ. ಬೇರೆ ರಾಜ್ಯದ ಮುಖ್ಯಮಂತ್ರಿಗಳು ಮೋದಿಯವರ ಕೆಲಸವನ್ನು ಮನೆ ಮನೆಗೆ ಮುಟ್ಟಿಸುವ ಕೆಲಸ ಮಾಡುತ್ತಾರೆ. ನಮ್ಮ ರಾಜ್ಯದ ನಾಯಕರನ್ನು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಾಕಿ ಪ್ರಚಾರ ಮಾಡ್ತಾ ಇದ್ದಾರೆ.

ಜನ ಸಾಮಾನ್ಯರು ಕೇಳ್ತಾ ಇದ್ದಾರೆ ರಾಜ್ಯ ನಾಯಕರನ್ನು ನೇಮಕ ಮಾಡಿಲ್ಲ ಎಂದು. ಕರ್ನಾಟಕದ ಬಿಜೆಪಿ ಆಡಳಿತವನ್ನು ಎಲ್ಲೋ ಒಂದು ಕಡೆ ಯಾರೋ ಒಬ್ಬರು ನಿಯಂತ್ರಣ ಮಾಡ್ತಾ ಇದ್ದಾರೆ. ಇದೇ ರೀತಿ ಮುಂದುವರಿದರೆ ರಾಜ್ಯ ಅದೋಗತಿಗೆ ಹೋಗುತ್ತದೆ ಎಂದು ಗುಡುಗಿದರು.

ಪಕ್ಷದಲ್ಲಿ ನಾಯಕರು ಇಲ್ಲ ಎಂದು ಬೇರೆ ಪಕ್ಷಕ್ಕೆ ಹೋಗುತ್ತಿದ್ದಾರೆ. ಆದರೆ ಹೋಗುವವರು ಹೋಗಲಿ, ಇರುವವರು ಇರಲಿ ಎಂದು ದುರಹಂಕಾರದ ಮಾತುಗಳನ್ನಾಡುತ್ತಿದ್ದಾರೆ. ಇದನ್ನೆಲ್ಲ ಬಿಡಬೇಕು. ಪಕ್ಷ ಸಂಘಟನೆ ಮಾಡಬೇಕು ಎಂದು ಸಂಸದ ಜಿಎಂ ಸಿದ್ದೇಶ್ವರ್ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments