ರೇಣುಕಸ್ವಾಮಿ ಪ್ರಕರಣ, ಪೊಲೀಸ್‌ಗೆ ಶರಣಾದ ಮತ್ತಿಬ್ಬರು ಆರೋಪಿಗಳು

sampriya
ಶುಕ್ರವಾರ, 14 ಜೂನ್ 2024 (18:39 IST)
Photo By X
ಬೆಂಗಳೂರು: ಚಿತ್ರದುರ್ಗಾದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ  13 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಇದೀಗ ಈ ಪ್ರಕರಣ ಸಂಬಂಧ ಮತ್ತಿಬ್ಬರನ್ನು ಬಂಧಿಸಿದ್ದಾರೆ.

ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಜತೆಗೆ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ಠಾಣೆಗೆ ತೆರಳಿ ಶರಣಾಗಿದ್ದಾರೆ. ಕೂಡಲೇ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು  ಚಿತ್ರದುರ್ಗದ ಅನುಕುಮಾರ್ ಅಲಿಯಾಸ್‌ ಅನು, ಜಗದೀಶ್ ಅಲಿಯಾಸ್‌ ಜಗ್ಗು ಎಂದು ಗುರುತಿಸಲಾಗಿದೆ.


ಇನ್ನು ಚಿತ್ರದುರ್ಗದ ಡಿವೈಎಸ್‌ಪಿ ಪಿ.ಕೆ ದಿನಾಕರ್ ಅವರಿಗೆ ಶರಣಾಗಿದ್ದು, ಅನು ಚಿತ್ರದುರ್ಗದ ಸಿಹಿನೀರ ಹೊಂಡ ನಿವಾಸಿಯಾದರೆ, ಜಗದೀಶ್ ಚಿತ್ತದುರ್ಗದ ರೈಲ್ವೆ ಸ್ಟೇಶನ್ ಏರಿಯಾ ನಿವಾಸಿಯಾಗಿದ್ದಾನೆ. ಸದ್ಯ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರಿಗೆ ಒಪ್ಪಿಸಿದ್ದು ಆ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಒಟ್ಟು 16 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದಂತಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments