Select Your Language

Notifications

webdunia
webdunia
webdunia
webdunia

APMC ಕಾಯ್ದೆ ರದ್ದು-ಸಚಿವ ಹೆಚ್‌.ಕೆ.ಪಾಟೀಲ್‌

APMC ಕಾಯ್ದೆ ರದ್ದು-ಸಚಿವ ಹೆಚ್‌.ಕೆ.ಪಾಟೀಲ್‌
bangalore , ಶುಕ್ರವಾರ, 16 ಜೂನ್ 2023 (18:43 IST)
ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನಿಕಟಪೂರ್ವ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ಕಾಯ್ದೆ ಬದಲು ಹಳೆಯ ಎಪಿಎಂಸಿ ಕಾಯ್ದೆಯನ್ನೆ ಮರುಜಾರಿಗೊಳಿಸುವ ತೀರ್ಮಾನಕ್ಕೆ ಈಗಿನ ಕಾಂಗ್ರೆಸ್‌ ಸರ್ಕಾರ ಬಂದಿದೆ. ಇಡೀ ದೇಶಕ್ಕೆ ಮಾದರಿಯಾಗಿದ್ದ ಕರ್ನಾಟಕ ಎಪಿಎಂಸಿ ಕಾಯ್ದೆಯ ಬದಲಾಗಿ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆದು ಮೂಲ ಕಾಯ್ದೆಯನ್ನು ಮತ್ತಷ್ಟು ಸುಧಾರಣೆಗಳೊಂದಿಗೆ ಮರು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಜುಲೈ 3ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಸದರಿ ಸುಧಾರಿತ ಎಪಿಎಂಸಿ ಮದೂ​ದೆ ಮಂಡಿಸಲು ತೀರ್ಮಾನಿಸಿದೆ. ಹಾಲಿ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು ಮಾಡಿ ಮೂಲ ಎಪಿಎಂಸಿ ಕಾಯ್ದೆಯ ಸುಧಾರಿತ ಸ್ವರೂಪದಲ್ಲಿ ಜಾರಿಗೊಳಿಸುವ ಸಂಬಂಧ ಜವಳಿ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ ಮತ್ತು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಹೆಚ್‌.ಕೆ.ಪಾಟೀಲ್‌ ಉನ್ನತ ಮಟ್ಟದ ಸಭೆ ನಡೆ​ಸಿ​ದರು. ಈ ಸಭೆಯಲ್ಲಿ ಸುಧಾರಿತ ಕಾಯ್ದೆ ಜಾರಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಸರ್ಕಾರ ತಂದಿದ್ದ ಕಾಯ್ದೆಗಳಿಗೆ ಎಳ್ಳು ನೀರು..!