ಸಹೋದರರಿಬ್ಬರಿಂದ ನಿರಂತರ ಅತ್ಯಾಚಾರ: 5 ತಿಂಗಳ ಗರ್ಭಿಣಿ ಸಂತ್ರಸ್ತೆಯನ್ನು ಜೀವಂತ ಹೂಳಲು ಯತ್ನ

Sampriya
ಶುಕ್ರವಾರ, 25 ಜುಲೈ 2025 (16:01 IST)
ಭುವನೇಶ್ವರ: ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯಲ್ಲಿ ಇಬ್ಬರು ಸಹೋದರರು 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಆಕೆ 5 ತಿಂಗಳ  ಗರ್ಭಿಣಿ ಎಂದು ಗೊತ್ತಾದ್ಮೇಲೆ ಆಕೆಯನ್ನು ಜೀವಂತವಾಗು ಹೂಳಲು ಯತ್ನಿಸಿದ ಘಟನೆ ವರದಿಯಾಗಿದೆ.  

ಪ್ರಕರಣ ಸಂಬಂಧ ಬನಶ್ಬರ ಗ್ರಾಮದ ಭಾಗ್ಯಧರ್ ದಾಸ್ ಮತ್ತು ಪಂಚನನ್ ದಾಸ್ ಎಂಬ ಇಬ್ಬರು ಸಹೋದರರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಮೂರನೇ ಆರೋಪಿಯ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ. 

ಪೊಲೀಸರ ಪ್ರಕಾರ, ಆರೋಪಿಯು ಅಪ್ರಾಪ್ತೆಯ ಮೇಲೆ ಹಲವಾರು ಬಾರಿ ಅತ್ಯಾಚಾರ ಎಸಗಿದ್ದಾನೆ. ಆಕೆಯ ಗರ್ಭಾವಸ್ಥೆಯನ್ನು ಅವರು ಪತ್ತೆ ಮಾಡಿದಾಗ, ಅವರು ತಮ್ಮ ಅಪರಾಧವನ್ನು ಮರೆಮಾಚಲು ಅವಳನ್ನು ಜೀವಂತವಾಗಿ ಹೂಳಲು ಯತ್ನಿಸಿದ್ದಾರೆ. 

ಪೊಲೀಸ್ ಮೂಲಗಳ ಪ್ರಕಾರ, ಆರೋಪಿಗಳು ಯುವತಿಯನ್ನು ಕರೆಸಿಕೊಂಡು ಗರ್ಭಪಾತ ಮಾಡಿಸಿಕೊಳ್ಳಲು ಹೇಳಿದ್ದಾರೆ. ಗರ್ಭಪಾತ ಮಾಡಿಸಿಕೊಳ್ಳದಿದ್ದರೆ ಜೀವಂತವಾಗಿ ನಾಲೆಯಲ್ಲಿ ಹೂತು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ.

ಸಂತ್ರಸ್ತೆ ಸ್ಥಳದಿಂದ ತಪ್ಪಿಸಿಕೊಂಡು ತನ್ನ ತಂದೆಯ ಬಳಿ ಹೇಳಿಕೊಂಡಿದ್ದಾಳೆ.  ಆಕೆಯನ್ನು ಜಿಲ್ಲಾ ಪ್ರಧಾನ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆಯ ತಂದೆ ಕುಜಾಂಗ್ ಪೊಲೀಸ್ ಠಾಣೆಯಲ್ಲಿ ಔಪಚಾರಿಕವಾಗಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments