Select Your Language

Notifications

webdunia
webdunia
webdunia
Sunday, 6 April 2025
webdunia

ಹೆಚ್ಚು ಅನುದಾನ ನೀಡುವಂತೆ ಸಿಎಂಗೆ ಮನವಿ?

ಬಜೆಟ್
ಬೆಂಗಳೂರು , ಶನಿವಾರ, 12 ಫೆಬ್ರವರಿ 2022 (14:50 IST)
ಬೆಂಗಳೂರು : 2022ರ ಬಜೆಟ್ನಲ್ಲಿ ಹಿಂದುಳಿದ ವರ್ಗಗಳ ಪ್ರತಿಯೊಂದು ಅಭಿವೃದ್ದಿ ನಿಗಮಗಳಿಗೆ,


ಹೆಚ್ಚಿನ ಮೊತ್ತದ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಮ್.ಸಿ. ವೇಣುಗೋಪಾಲ್ ನೇತೃತ್ವದ ತಂಡ ಭೇಟಿ ನೀಡಿ ಮನವಿ ಸಲ್ಲಿಸಿದೆ.

2022ರ ಸಾಲಿನ ಬಜೆಟ್ನಲ್ಲಿ ಹಿಂದುಳಿದ ವರ್ಗಗಳ ಪ್ರತಿಯೊಂದು ನಿಗಮಗಳಿಗೆ 50 ಕೋಟಿ ಅನುದಾನ ನೀಡಬೇಕು. ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ, ವಿದ್ಯಾರ್ಥಿ ನಿಲಯಗಳಿಗೆ, ವಿದ್ಯಾರ್ಥಿ ವೇತನಕ್ಕೆ ಮತ್ತು ದೇವರಾಜ ಅರಸು ಅಭಿವೃದ್ಧಿ ನಿಗಮಕ್ಕೆ ಒಟ್ಟು 50,000 ಕೋಟಿ ರೂ. ಅನುದಾನ ನೀಡಬೇಕು ಎಂದು ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ. 

ಹಿಂದುಳಿದ ವರ್ಗಗಳ ಕೇಂದ್ರ ಸರ್ಕಾರದ ಮೀಸಲಾತಿ ಪಟ್ಟಿಗೆ ಕರ್ನಾಟಕದ 70 ಜಾತಿ – ಉಪಜಾತಿಗಳನ್ನು ಸೇರ್ಪಡೆಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದೆ.

ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಮನವಿಗೆ ಸ್ಪಂದಿಸಿದ ಸಿಎಂ ಹಿಂದುಳಿದ ವರ್ಗದ ಆಯೋಗ ವರದಿ ನೀಡುವ ತನಕ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಎಮ್. ಸಿ. ವೇಣುಗೋಪಾಲ್ ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜಸ್ಥಾನ ಕಾಲೇಜಿನಲ್ಲೂ ಸಹ ಹಿಜಾಬ್ ವಿವಾದ!