Select Your Language

Notifications

webdunia
webdunia
webdunia
webdunia

ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ಸೂಚಿಸುವಂತೆ ರಾಜ್ಯಪಾಲರಿಗೆ ಮನವಿ : ಬೊಮ್ಮಾಯಿ

ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ಸೂಚಿಸುವಂತೆ ರಾಜ್ಯಪಾಲರಿಗೆ ಮನವಿ : ಬೊಮ್ಮಾಯಿ
ಬೆಂಗಳೂರು , ಬುಧವಾರ, 12 ಜುಲೈ 2023 (12:18 IST)
ಬೆಂಗಳೂರು : ಜೈನ ಮುನಿಗಳ ಕೊಲೆ ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಬುಧವಾರ ಮನವಿ ಸಲ್ಲಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
 
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೈನ ಮುನಿಗಳನ್ನು ಅಮಾನವೀಯ ರೀತಿಯಲ್ಲಿ ಕೊಲೆ ಮಾಡಲಾಗಿದೆ. ಇಷ್ಟೆಲ್ಲಾ ನಡೆದರೂ ರಾಜ್ಯ ಸರ್ಕಾರ ಇದನ್ನು ಹಗುರವಾಗಿ ತೆಗೆದುಕೊಂಡಿದೆ. ಸಾರ್ವಜನಿಕರ ವಲಯದಲ್ಲಿ ಈ ಪ್ರಕರಣ ಸಿಬಿಐಗೆ ಕೊಡಬೇಕೆಂಬ ಆಗ್ರಹ ಇದೆ. ನಾವು ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಅಗ್ರಹಿಸಿದ್ದೇವೆ ಎಂದರು.

ಟಿ ನರಸೀಪುರದಲ್ಲಿಯೂ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದೆ. ಸಕಲೇಶಪುರದಲ್ಲೂ ಹತ್ಯೆಯಾಗಿದೆ. ಕಲಬುರಗಿಯಲ್ಲಿ ಹೆಡ್ ಕಾನ್ ಸ್ಟೇಬಲ್ ಅಕ್ರಮ ಮರಳು ದಂಧೆ ಮಾಡುವುದನ್ನು ತಡೆಯಲು ತೆರಳಿದವನ ಕೊಲೆ ಮಾಡುತ್ತಾರೆ. ಹಫ್ತಾ ವಸೂಲಿಗೆ ಹಿರಿಯ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ.

ಈ ಸರ್ಕಾರದಲ್ಲಿ ಸಮಾಜಘಾತುಕರಿಗೆ ಯಾರೂ ಏನೂ ಮಾಡಲು ಆಗುವುದಿಲ್ಲ ಎಂಬ ಧೈರ್ಯ ಬಂದಿದೆ. ಈ ಸರ್ಕಾರ ಒಂದೂವರೆ ತಿಂಗಳಲ್ಲಿ ಕಾನೂನು ಸುವ್ಯವಸ್ಥೆ ಇಷ್ಟೊಂದು ಹದಗೆಟ್ಟಿದೆ. ಇವರು ಐದು ದೋಖಾಗಳ ನಡುವೆ ಕಾನೂನು ಸುವ್ಯವಸ್ಥೆ ದೋಖಾ ಕೊಡುಗೆ ನೀಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ನಾಳೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಟೊಮ್ಯಾಟೊಗಾಗಿ ಚಾಕು ಇರಿತ! ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ