Publish Date: Fri, 15 Dec 2017 (19:15 IST)
Updated Date: Fri, 15 Dec 2017 (19:18 IST)
ವಿದ್ಯುನ್ಮಾನ ಮತಯಂತ್ರ ದುರ್ಬಳಕೆ ಆಗುವ ಸಾಧ್ಯತೆಯಿರುವುದರಿಂದ ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತಪತ್ರ ಬಳಕೆಗೆ ಒತ್ತಾಯಿಸಿ ಚುನಾವಣೆ ಆಯೋಗಕ್ಕೆ ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ವಿದ್ಯುನ್ಮಾನ ಮತಯಂತ್ರದ ಬಗ್ಗೆ ಆತಂಕದ ಮಾತನಾಡಿದ್ದಾರೆ. ಹೀಗಾಗಿ ಮತಪತ್ರವಿರುವ ಹಳೇ ಪದ್ದತಿ ಬಳಸುವುದು ಸೂಕ್ತವಾಗಿದೆ ಎಂದಿದ್ದಾರೆ.
ಗುಜರಾತ್ ಅಥವಾ ಬೇರೆ ಯಾವುದೇ ರಾಜ್ಯದ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.