Publish Date: Wed, 27 Oct 2021 (12:57 IST)
Updated Date: Wed, 27 Oct 2021 (09:00 IST)
ಹಾನಗಲ್ : ಒನ್ ನೇಷನ್ ಒನ್ ಎಲೆಕ್ಷನ್ ಜಾರಿ ಅಗತ್ಯವಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅಭಿಪ್ರಾಯಪಟ್ಟಿದ್ದಾರೆ.
ಪದೇ ಪದೇ ಚುನಾವಣೆ ನಡೆಸುವುದರಿಂದ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳ ಮೇಲೆ ಪರಿಣಾಮ ಉಂಟಾಗುವುದರಿಂದ ಒನ್ ನೇಷನ್ ಒನ್ ಎಲೆಕ್ಷನ್ ಜಾರಿ ಮಾಡುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒನ್ ನೇಷನ್ ಒನ್ ಎಲೆಕ್ಷನ್ ಜಾರಿ ಮಾಡುವ ಎಲ್ಲಾ ಪಕ್ಷಗಳ ಸಹಮತ ಅಗತ್ಯವಿದೆ ಎಂದು ತಿಳಿಸಿದ್ದಾರೆ.