Select Your Language

Notifications

webdunia
webdunia
webdunia
webdunia

50 ಅಡಿ ಆಳದಲ್ಲಿ ಬಿದ್ದಿದ್ದ ಯುವಕನ ರಕ್ಷಣೆ

Rescue of a young man who fell 50 feet deep
ಉತ್ತರ ಕನ್ನಡ , ಸೋಮವಾರ, 2 ಜನವರಿ 2023 (17:18 IST)
ಟ್ರೆಕ್ಕಿಂಗ್​ಗೆ ತೆರಳಿದ್ದ ವೇಳೆ ಐವತ್ತು ಅಡಿಗೂ ಅಧಿಕ ಆಳದಲ್ಲಿ ಬಿದ್ದಿದ್ದ ಪ್ರವಾಸಿಗನನ್ನು ರಕ್ಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಸೌರವ ಯಾದವ್, ಗೋಕರ್ಣದ ಪ್ಯಾರಡೈಸ್ ಬೀಚ್‌ಗೆ ಟ್ರೆಕ್ಕಿಂಗ್ ಹೊಗಿದ್ದ. ಈ ವೇಳೆ ಆಯತಪ್ಪಿ ಕಂದಕಕ್ಕೆ ಬಿದ್ದು ಕಾಲಿಗೆ ಗಂಭೀರ ಗಾಯವಾಗಿತ್ತು. ಯುವಕ ಬಿದ್ದಿದ್ದನ್ನ ಪ್ರವಾಸಿ ಬೋಟ್ ಚಾಲಕ ಗಮನಿಸಿ, ಕರಾವಳಿ ಕಾವಲುಪಡೆಗೆ ಮಾಹಿತಿ ನೀಡಿದ್ದಾನೆ. ಕರಾವಳಿ ಕಾವಲುಪಡೆ, ಲೈಫ್‌ಗಾರ್ಡ್ ಸಿಬ್ಬಂದಿ ಯುವಕನನ್ನು ರಕ್ಷಣೆ ಮಾಡಿದ್ದಾರೆ. ಯುವಕನಿಗೆ ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಅದೃಷ್ಟವಶಾತ್ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸಿಎಂ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆಂದು ಒತ್ತಾಯ