Publish Date: Wed, 23 Feb 2022 (18:09 IST)
Updated Date: Wed, 23 Feb 2022 (18:11 IST)
ಹಿಂದುಳಿದ ಜಾತಿಯ ರಾಜಕೀಯ ಮೀಸಲಾತಿಗೆ ಎದುರಾಗಿರುವ ಅಡ್ಡಿ ನಿವಾರಿಸಲು ರಾಜ್ಯ ಸರ್ಕಾರ ತಕ್ಷಣ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಈ ಅಡ್ಡಿಯನ್ನು ಪರಿಹರಿಸಿಕೊಳ್ಳಲು ಸಾಧ್ಯವಿದೆ.
ವರದಿಯನ್ನು ಸರ್ಕಾರ ಒಪ್ಪಿಕೊಂಡು ಜಾರಿಗೆ ತರಬೇಕು. ಇದನ್ನೇ ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯ ತಪ್ಪಿಸಬೇಕು' ಎಂದು ಒತ್ತಾಯಿಸಿದರು. ಇನ್ನೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣ ವಿರೋಧ ಪಕ್ಷಗಳ ನಾಯಕರು ಮತ್ತು ಕಾನೂನು ತಜ್ಞರ ಸಭೆ ಕರೆದು ಚರ್ಚೆ ನಡೆಸಿ, ಸುಪ್ರೀಂ ಕೋರ್ಟ್ ಆದೇಶದಿಂದ ಉದ್ಭವವಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಅಭಿಪ್ರಾಯ ಪಡೆದು ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು' ಎಂದು ಸಿದ್ದರಾಮಯ್ಯ ಹೇಳಿದ್ದಾರೆ.